HomeKarnatakaಶಿಕ್ಷಕಿ ಬೈದಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ನಾಲ್ವರ ವಿರುದ್ಧ FIR ದಾಖಲು; ಓರ್ವ ಶಿಕ್ಷಕಿ, ಅಡುಗೆ...

ಶಿಕ್ಷಕಿ ಬೈದಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ನಾಲ್ವರ ವಿರುದ್ಧ FIR ದಾಖಲು; ಓರ್ವ ಶಿಕ್ಷಕಿ, ಅಡುಗೆ ಸಹಾಯಕಿ ಕೆಲಸದಿಂದ ವಜಾ

ಆನೇಕಲ್: ಶಿಕ್ಷಕಿ ಬೈದಿದ್ದಕ್ಕೆ ಮನನೊಂದು 8ನೇ ತರಗತಿಯ ವಿದ್ಯಾರ್ಥಿನಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಶಿಕ್ಷಕಿಯರು, ಓರ್ವ ಅಡುಗೆ ಸಹಾಯಕಿ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಮರಸೂರು ಮಡಿವಾಳದಲ್ಲಿ 8ನೇ ತರಗತಿ ವಿದ್ಯಾರ್ಥಿನಿ ಮಧುಶ್ರೀ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ಘಟನೆ ನಡೆದಿದೆ. ವಿದ್ಯಾರ್ಥಿ ಸಾವಿಗೆ ಸಂಬಂಧಿಸಿದಂತೆ ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಸುಜಾತ ಈರಪ್ಪ, ಸಹ ಶಿಕ್ಷಕಿಯರಾದ ಕವಿತಾ, ರೂಪಾ ಹಾಗೂ ಅಡುಗೆ ಸಹಾಯಕಿ ಕಮಲಮ್ಮ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ವಿದ್ಯಾರ್ಥಿನಿ ಮಧುಶ್ರೀಗೆ ಮಾನಸಿಕವಾಗಿ ಕಿರುಕುಳ ನೀಡಿದ್ದರು ಎಂಬ ಆರೋಪ ಕೇಳಿಬಂದಿದೆ.

ಇದೇ ಪ್ರಕರಣದಲ್ಲಿ ಓರ್ವ ಶಿಕ್ಷಕಿ ಹಾಗೂ ಅಡುಗೆ ಸಹಾಯಕಿಯನ್ನು ಕೆಲಸದಿಂದ ವಜಾಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿದ್ಯಾರ್ಥಿ ಮಧುಶ್ರೀ ಸಾಯುವ ಮುನ್ನ ಶಾಲಾ ವಿಧ್ಯಾರ್ಥಿಗಳು ಸೇರಿಕೊಂಡು ಮಾನಸಿಕ ಕಿರುಕುಳ ನೀಡುತ್ತಿದ್ದ ವಿಚಾರದ ಬಗ್ಗೆ ಲೆಟರ್ ಬರೆದಿದ್ದರು. ಇದನ್ನು ಗ್ರಾಮಪಂಚಾಯಿತಿ ಪಿಡಿಓಗೆ ನೀಡಲು ನಿರ್ಧರಿಸಿ, ಮಧುಶ್ರೀ ಬ್ಯಾಗ್‌ನಲ್ಲಿ ಇಟ್ಟುಕೊಂಡಿದ್ದಳು. ಈ ವಿಷಯ ತಿಳಿದು ಶಿಕ್ಷಕಿಯರು ಮಧುಶ್ರೀಯನ್ನ ಮತ್ತಷ್ಟು ಟಾರ್ಗೆಟ್ ಮಾಡಿದ್ದರಂತೆ. ಅಲ್ಲದೇ ಸಾಯೋಕು ಹಿಂದಿನ ದಿನ ಶಾಲೆಯ ದೈಹಿಕ ಶಿಕ್ಷಕ ಶ್ರೀನಿವಾಸ್ ಅವರಿಗೆ ಮಧುಶ್ರೀ ಈ ಬಗ್ಗೆ ತಿಳಿಸಿದ್ದಳು.

ಅದೇ ದಿನ ಮನೆಗೆ ಬಂದ ಮಧುಶ್ರೀ, ಶಾಲೆಯಲ್ಲಿ ಶಿಕ್ಷಕಿಯರು ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ ಎಂದು ನಡೆದ ಎಲ್ಲಾ ವಿಚಾರವನ್ನ ಸಹೋದರಿ ಭಾನುಶ್ರೀಗೆ ಹೇಳಿದ್ದಳು. ಅದಾದ ಬಳಿಕ ಮಧುಶ್ರೀ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಳು. ವಿದ್ಯಾರ್ಥಿನಿ ಮಧುಶ್ರೀ ರಾಜ್ಯಮಟ್ಟದ ಕಬ್ಬಡಿ ಆಟಗಾರ್ತಿಯಾಗಿದ್ದಳು.

ಡೆತ್‌ನೋಟ್ ನಲ್ಲಿ ಶಾಲೆಯಲ್ಲಿ ನಡೆದ ಘಟನೆ ನನಗೆ ತುಂಬಾ ನೋವು ತಂದಿದೆ. ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡಿದ್ದಾರೆ. ಈ ಅವಮಾನ ಸಹಿಸಿಕೊಂಡು ಬದುಕಲು ಆಗುತ್ತಿಲ್ಲ. ಮನಸ್ಸಿಗೆ ತುಂಬಾ ನೋವಾಗಿದ್ದರಿಂದ ಈ ನಿರ್ಧಾರ ತೆಗೆದುಕೊಳ್ಳುತ್ತಿದ್ದೇನೆ ಎಂದು ವಿದ್ಯಾರ್ಥಿನಿ ಬರೆದಿದ್ದಳು. ಅಮ್ಮ, ಅಕ್ಕ, ತಂಗಿ, ತಮ್ಮ ಯಾರದ್ದೂ ತಪ್ಪಿಲ್ಲ. ನನ್ನ ಅಮ್ಮನನ್ನು ಯಾರು ಕೂಡ ಬೈಯ್ಯಬೇಡಿ. ಎಲ್ಲರೂ ನನ್ನನ್ನು ಕ್ಷಮಿಸಿ. ನನಗೆ ಈ ಭೂಮಿ ಮೇಲೆ ಬದುಕುವ ಅರ್ಹತೆ ಇಲ್ಲ ಎಂದು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದಳು. ಡೆತ್‌ನೋಟ್ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಮುಂದುವರಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular