ತುಮಕೂರು: ಶಾಲಾ ಆವರಣದಲ್ಲಿ ವಿದ್ಯುತ್ ಪ್ರವಹಿಸಿ ವಿದ್ಯಾರ್ಥಿ ಸಾವನ್ನಪ್ಪಿದ್ದಾರೆ. ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಬೋರಪ್ಪನ ಹಟ್ಟಿಯ ಶಾಲಾ ಆವರಣದಲ್ಲಿ ಘಟನೆ ನಡೆದಿದೆ.
ಪುನೀತ್(16) ಮೃತಪಟ್ಟ ಬಾಲಕ ಎಂದು ಹೇಳಲಾಗಿದೆ. ಬೋರಪ್ಪನಹಟ್ಟಿ ಗ್ರಾಮದ ಶಾಲಾ ಆವರಣದಲ್ಲಿ ಜೋತು ಬಿದ್ದಿದ್ದ ವಿದ್ಯುತ್ ತಂತಿಂದ ಕರೆಂಟ್ ಶಾಕ್ ಹೊಡೆದಿದೆ. ಬೆಸ್ಕಾಂ ನಿರ್ಲಕ್ಷ್ಯಕ್ಕೆ ಗ್ರಾಮದ ಜನರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಶಾಲಾ ಆವರಣದಲ್ಲಿ ವಿದ್ಯುತ್ ತಂತಿ ಜೋತುಬಿದ್ದಿದ್ದರೂ ಬೆಸ್ಕಾಂ ಸಿಬ್ಬಂದಿ ಸರಿಪಡಿಸದೇ ನಿರ್ಲಕ್ಷ್ಯ ತೋರಿದ್ದರು. ಇದರಿಂದ ವಿದ್ಯುತ್ ಪ್ರವಹಿಸಿ ಪುನೀತ್ ಮೃತಪಟ್ಟಿದ್ದಾನೆ ಎನ್ನಲಾಗಿದೆ.

