HomeKarnatakaಬೆಂಗಳೂರು ಏರ್ ಪೋರ್ಟ್ ನಲ್ಲಿ ಬರೋಬ್ಬರಿ 4.22 ಕೋಟಿ ಮೌಲ್ಯದ ಡ್ರಗ್ಸ್ ಪತ್ತೆ: ಪ್ರಯಾಣಿಕ ಅರೆಸ್ಟ್

ಬೆಂಗಳೂರು ಏರ್ ಪೋರ್ಟ್ ನಲ್ಲಿ ಬರೋಬ್ಬರಿ 4.22 ಕೋಟಿ ಮೌಲ್ಯದ ಡ್ರಗ್ಸ್ ಪತ್ತೆ: ಪ್ರಯಾಣಿಕ ಅರೆಸ್ಟ್

ಬೆಂಗಳೂರು: ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ವಿದೇಶದಿಂದ ಬೆಂಗಳೂರುಗೆ ಅಕ್ರಮವಾಗಿ ಸಾಗಿಸುತ್ತಿದ್ದ 12.07 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ಜಪ್ತಿ ಮಾಡಿದ್ದಾರೆ.

ವಿದೇಶದಿಂದ ಬಂದಿದ್ದ ಪ್ರಯಾಣಿಕನೋರ್ವನನ್ನು ತಪಾಸಣೆಗೊಳಪಡಿಸಿದಾಗ ಆತನ ಬಳಿ ಕೋಟ್ಯಂತರ ಮೌಲ್ಯದ ಮಾದಕ ವಸ್ತು ಇರುವುದನ್ನು ಕಸ್ಟಮ್ಸ್​​ ಅಧಿಕಾರಿಗಳು ಪತ್ತೆ ಮಾಡಿದ್ದಾರೆ.
ಬರೋಬ್ಬರಿ 12.07 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದ್ದು, ಎನ್​​ಡಿಪಿಎಸ್​​ ಕಾಯ್ದೆಯಡಿ ಆರೋಪಿಯನ್ನು ಬಂಧಿಸಿದ್ದಾರೆ.

ಇನ್ನು ಬಂಧಿತ ಆರೋಪಿಯಿಂದ ವಶಪಡಿಸಿಕೊಳ್ಳಲಾಗಿರುವ ಹೈಡ್ರೋಪೋನಿಕ್ ಗಾಂಜಾದ ಮೌಲ್ಯ ಸುಮಾರು 4 ಕೋಟಿ 22 ಲಕ್ಷ ರೂಪಾಯಿಗಳು ಎನ್ನಲಾಗಿದೆ. ಬ್ಯಾಂಕಾಕ್​​ನಿಂದ ಬೆಂಗಳೂರಿಗೆ ಬಂದಿದ್ದ ಪ್ರಯಾಣಿಕ ಲಗೇಜ್ ಬ್ಯಾಗ್​​ನಲ್ಲ ಮಾದಕ ವಸ್ತುವನ್ನು ಅಡಗಿಸಿಟ್ಟುಕೊಂಡು ಬರುವ ಮೂಲಕ ಸಾಗಾಟ ಯತ್ನ ನಡೆಸಿದ್ದ. ಆದರೆ ಏರ್​​ಪೋರ್ಟ್​​ಬಲ್ಲಿ ಪ್ರಯಾಣಿಕರ ತಪಾಸಣೆ ವೇಳೆ ಗಾಂಜಾವನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜೂನ್​​ 26ರಂದು ಬ್ಯಾಂಕಾಕ್‌ನಿಂದ ಬಂದ ಪ್ರಯಾಣಿಕನ ಬ್ಯಾಗೇಜ್‌ನಲ್ಲಿ 2.086 ಕೋಟಿ ರೂಪಾಯಿ ಮೌಲ್ಯದ 5.960 ಕೆಜಿ ಹೈಡ್ರೋಪೊನಿಕ್ ಗಾಂಜಾ ಪತ್ತೆ ಮಾಡಿದ್ದರು. ಇನ್ನೊಂದು ಪ್ರತ್ಯೇಕ ಕಾರ್ಯಾಚರಣೆಯಲ್ಲಿ, ಪ್ರಯಾಣಿಕನಿಂದ ಅಂದಾಜು 5.58 ಕೋಟಿ. ಮೌಲ್ಯದ 6.98 ಕೆಜಿ ಮೆಸ್ಕಲಿನ್ (Mescaline) ಮಾದಕ ವಸ್ತುವನ್ನು ವಶಪಡಿಸಿಕೊಂಡು, ಎರಡೂ ಪ್ರಕರಣಗಳ ಸಂಬಂಧ ಆರೋಪಿಗಳನ್ನು ಬಂಧಿಸಿದ್ದರು. ಜೂ. 17ರಂದು ಪ್ರಯಾಣಿಕನಿಂದ 5.43 ಕೋಟಿ ಮೌಲ್ಯದ 15.520 ಕೆಜಿ ಹೈಡ್ರೋಪೊನಿಕ್ ಗಾಂಜಾ ಮತ್ತು ಜೂ. 29ರಂದು ಬ್ಯಾಂಕಾಕ್‌ನಿಂದ ಆಗಮಿಸಿದ್ದ ಪ್ರಯಾಣಿಕನೋರ್ವನಿಂದ 8.00 ಕೆಜಿ ತೂಕವಿರುವ 2.80 ಕೋಟಿ ಮೌಲ್ಯದ ಮಾದಕ ವಸ್ತುವನ್ನು ಜಪ್ತಿ ಮಾಡಿದ್ದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular