HomeKarnatakaಸೋದರಮಾವನೊಂದಿಗೆ ಬಲವಂತದ ಮದುವೆ; ಮನನೊಂದು ನವವಿವಾಹಿತೆ ಆತ್ಮಹತ್ಯೆ; ಪತ್ನಿ ಸಾವಿನ ಸುದ್ದಿ ಕೇಳಿ ಪತಿಯೂ ನೇಣಿಗೆ...

ಸೋದರಮಾವನೊಂದಿಗೆ ಬಲವಂತದ ಮದುವೆ; ಮನನೊಂದು ನವವಿವಾಹಿತೆ ಆತ್ಮಹತ್ಯೆ; ಪತ್ನಿ ಸಾವಿನ ಸುದ್ದಿ ಕೇಳಿ ಪತಿಯೂ ನೇಣಿಗೆ ಶರಣು

ತುಮಕೂರು: ಯುವತಿಗೆ ಇಷ್ಟವಿಲ್ಲದಿದ್ದರೂ ಕುಟುಂಬದವರೆಲ್ಲ ಸೇರಿ ಸೋದರಮಾವನೊಂದಿಗೆ ಬಲವಂತವಾಗಿ ಮದುವೆ ಮಾಡಿಸಿದ್ದರು. ಇದರಿಂದ ಮನನೊಂದ ನವವಿವಾಹಿತೆ ನೇಣಿಗೆ ಶರಣಾಗಿದ್ದು, ಪತ್ನಿ ಸಾವಿನ ಸುದ್ದಿ ಕೇಳಿ ಪತಿಯೂ ಸಾವಿಗೆ ಶರಣಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಹನುಮನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಶರಣ್ಯ (20), ಗಿರೀಶ್ (28) ಆತ್ಮಹತ್ಯೆಗೆ ಶರಣಾದ ನವದಂಪತಿ. ದಂಪತಿ ಕಳೆದ ಕಳೆದ ನಾಲ್ಕು ತಿಂಗಳ ಹಿಂದೆ ವಿವಾಹವಾಗಿದ್ದರು. ಸೋದರಮಾಅವನ ಜೊತೆ ವಿವಾಹ ಶಣ್ಯಳಿಗೆ ಇಷ್ಟವಿರಲಿಲ್ಲ. ಆದರೂ ಕುಟುಂಬದವರೆಲ್ಲ ಸೇರಿ ಮದುವೆ ಮಾಡಿಸಿದ್ದರು. ಮದುವೆಯಾದಾಗಿನಿಂದಲೂ ಶರಣ್ಯ- ಗಿರೀಶ್ ನಡುವೆ ಹೊಂದಾಣಿಕೆ ಇರಲಿಲ್ಲ. ಪದೇ ಪದೇ ಜಗಳವಾಗುತ್ತಿತ್ತು. ಇಬ್ಬರಿಗೂ ಇಷ್ಟವಿಲ್ಲದಿದ್ದರೂ ಎರಡೂ ಕುಟುಂಬಗಳು ಬಲವಂತವಾಗಿ ಮದುವೆ ಮಾಡಿದ್ದರು ಎನಲಾಗಿದೆ.

ಇದರಿಂದ ಬೇಸತ್ತ ಶರಣ್ಯ ಮನೆಯಲ್ಲಿ ಯಾರು ಇಲ್ಲದೆ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಇದನ್ನ ಕಂಡ ಪತಿ ಹೊಲದ ಹತ್ತಿರದಲ್ಲಿದ್ದ ಮರಕ್ಕೆ ನೇಣಿಬಿಗಿದುಕೊಂಡು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಥಳಕ್ಕೆ ಪಟ್ಟನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಯುಡಿಆರ್ (ಅಸ್ವಾಭಾವಿಕ ಸಾವು) ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular