HomeKarnatakaರೇಣುಕಾಸ್ವಾಮಿ ಹತ್ಯೆ ಪ್ರಕರಣದ ಸಾಕ್ಷಿಗಳಿಗೆ ಬೆದರಿಕೆ ಪ್ರಕರಣ: ಆರೋಪಿಗಳ ವಿಚಾರಣೆ ವೇಳೆ ಪ್ರಭಾವಿ ವ್ಯಕ್ತಿಗಳ ನಂಟು...

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಸಾಕ್ಷಿಗಳಿಗೆ ಬೆದರಿಕೆ ಪ್ರಕರಣ: ಆರೋಪಿಗಳ ವಿಚಾರಣೆ ವೇಳೆ ಪ್ರಭಾವಿ ವ್ಯಕ್ತಿಗಳ ನಂಟು ಪತ್ತೆ

ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿಗಳಿಗೆ ಬೆದರಿಕೆ ಹಾಕಿದ ಕೇಸ್ ನಲ್ಲಿ ಆರೋಪಿಗಳಿಗೆ ಪ್ರಭಾವಿಗಳ ಜೊತೆ ನಂಟಿರುವುದು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ.

ಸಾಕ್ಷಿಗಳಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಈಗಾಗಲೇ ಪೊಲೀಸರು ದರ್ಶನ್ ಅಭಿಮಾನಿ ಪುನೀತ್, ವೇಣು, ಸುಹಾನ್ ಎಂಬುವವರನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಆರೋಪಿ ಪುನೀತ್ ಗೆ ಗೌರವ್ ಶೆಟ್ಟಿ, ಕಿರಣ್ ರೆಡ್ಡಿ ಎಂಬುವವರ ಜೊತೆ ಸಂಪರ್ಕವಿರುವುದು ಬಯಲಾಗಿದೆ. ಗೌರವ್ ಶೆಟ್ಟಿ ಸಂಜಯ್ ನಗರ ಬಾರ್ ಮಾಲೀಕನ ಸ್ನೇಹಿತ ಎಂದು ತಿಳಿದುಬಂದಿದೆ.

ಆರೋಪಿ ಹಾಗೂ ಗೌರವ್, ಕಿರಣ್ ಮೂವರೂ ವಾಟ್ಸಪ್ ಕರೆ ಮೂಲಕ ಸಂಪರ್ಕದಲ್ಲಿದ್ದರು. ಈಗ ಪುನೀತ್ ಬಂಧನವಾಗುತ್ತಿದ್ದಂತೆ ಗೌರವ್ ಹಾಗೂ ಕಿರಣ್ ಪರಾರಿಯಾಗಿದ್ದು, ತಲೆಮರೆಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular