HomeLatest NewsBIG NEWS: ಜು.15ರ ಸಭೆಯ ಬಳಿಕ ಕಾವೇರಿ ನೀರು ಹರಿಸುವ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್

BIG NEWS: ಜು.15ರ ಸಭೆಯ ಬಳಿಕ ಕಾವೇರಿ ನೀರು ಹರಿಸುವ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಕಾವೇರಿ ವಿಚಾರದಲ್ಲಿ ನಾವು ರೈತರನ್ನು ಬದುಕಿಸಬೇಕು. ಕುಡಿಯುವ ನೀರನ್ನು ಪೂರೈಸಬೇಕು, ತಮಿಳುನಾಡು ಪಾಲಿನ ನೀರು ಹರಿಸುವ ಕೋರ್ಟ್ ಆದೇಶವನ್ನು ಪಾಲನೆ ಮಾಡಬೇಕು. 15ರಂದು ಕಾವೇರಿ ಮಂಡಳಿ ಸಭೆ ನಡೆಯಲಿದೆ. ಆ ಸಭೆಯಲ್ಲಿ ನಮ್ಮ ರಾಜ್ಯದ ವಾದ ಮಂಡಿಸುತ್ತೇವೆ. ನಂತರ ತೀರ್ಮಾನವನ್ನು ತಿಳಿಸುತ್ತೇವೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಡಿ.ಕೆ.ಶಿವಕುಮಾರ್, ನೀರಿಲ್ಲದೇ ರೈತರು ಬೆಳೆದ ಬೆಳೆಗಳು ಒಣಗುತ್ತಿವೆ. ನಾಲೆಗಳಿಗೆ ಕಾವೇರಿ ನೀರು ಹರಿಸುವಂತೆ ಮಂಡ್ಯ ಶಾಸಕರು ಮನವಿ ಮಾಡಿದ್ದಾರೆ. ಮಂಡ್ಯದವರು, ಶ್ರೀರಂಗಪಟ್ಟಣದವರು, ಜಿಲ್ಲಾ ಸಚಿವರು ಬಂದು ಭೇಟಿ ಮಾಡಿದ್ದರು. ಸಭೆ ಬಳಿಕ ತೀರ್ಮಾನ ತಿಳಿಸುತ್ತೇವೆ ಎಂದು ಹೇಳಿದ್ದೇವೆ ಎಂದರು.

ನಾವು ನಮ್ಮ ರೈತರನ್ನು ಬದುಕಿಸಬೇಕು. ಕುಡಿಯುವ ನೀರನ್ನು ಪೂರೈಸಬೇಕು, ತಮಿಳುನಾಡು ಪಾಲಿನ ನೀರು ಹರಿಸುವ ಕೋರ್ಟ್ ಆದೇಶವನ್ನು ಪಾಲನೆ ಮಾಡಬೇಕು. ಹಾಗಾಗಿ ಜುಲೈ 15ರಂದು ನಡೆಯಲಿರುವ ಸಭೆ ಬಳಿಕ ನಿರ್ಧಾರ ಮಾಡುವುದಾಗಿ ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆಪಿಎಸ್ ಸಿ ಅಧ್ಯಕ್ಷರ ಅಮಾನತ್ತಿನ ವಿಚಾರವಾಗಿ, ರಾಜ್ಯಪಾಲರು ಈ ಆದೇಶ ಮಾಡಿದ್ದಾರೆ. ಅವರ ನಂತರ ಯಾರು ಹಿರಿಯರು ಇದ್ದಾರೋ ಅವರಿಗೆ ಜವಾಬ್ದಾರಿ ನೀಡುವಂತೆ ನಿರ್ದೇಶನ ನೀಡಿದ್ದೇನೆ ಎಂದರು.

ಇನ್ನು ತಿರುಪತಿಯಲ್ಲಿ ಮೊದಲ ಆರತಿ ಕರ್ನಾಟಕ ರಾಜ್ಯದವರಿಗೆ ಎಂಬ ತೀರ್ಮಾನದ ಬಗ್ಗೆ ತಿರುಪತಿಯಲ್ಲಿ ಮಹಾರಾಜರ ಕಾಲದಿಂದಲೂ ಮೊದಲ ಆರತಿ ಕರ್ನಾಟಕದ್ದಾಗಿದೆ. ಅಲ್ಲಿ ಪ್ರತಿದಿ‌ನ ಅಧಿಕಾರಿಯೊಬ್ಬರು ಆರತಿ ಪಡೆಯುತ್ತಾರೆ. ಆ ಅಧಿಕಾರಿ ಬದಲಿಗೆ ಇಲ್ಲಿಂದ ದರ್ಶನಕ್ಕೆ ಹೋಗುವ ಜನಪ್ರತಿನಿಧಿಗಳು, ನ್ಯಾಯಾಧೀಶರು, ಅಧಿಕಾರಿಗಳಿಗೆ, ಸಂಸದರು, ಮೇಯರ್, ತಹಶೀಲ್ದಾರ್ ಸೇರಿದಂತೆ ನಮ್ಮ ರಾಜ್ಯದವರಿಗೆ ಅವಕಾಶ ನೀಡಲಾಗುವುದು. ಇದು ನಿರ್ದಿಷ್ಟ ಪಕ್ಷಕ್ಕೆ ಎಂದು ಸೀಮಿತವಲ್ಲ. ಯಾವುದೇ ಪಕ್ಷದ ಜನಪ್ರತಿನಿಧಿಗಳು ಹೋದರು ಈ ಅವಕಾಶ ಅವರಿಗೆ ಸಿಗಬೇಕು. ಇದಕ್ಕೆ ನಿರ್ದಿಷ್ಟ ಮಾರ್ಗಸೂಚಿಗಳಿದ್ದು, ಅದರಂತೆಯೇ ಈ ಅವಕಾಶ ನೀಡಲಾಗುವುದು. ನಮ್ಮ ತೀರ್ಮಾನ ಕೇವಲ ಆರತಿ ವಿಚಾರಕ್ಕೆ ಮಾತ್ರ. ಉಳಿದಂತೆ ಎಲ್ಲಾ ಮಾರ್ಗಸೂಚಿಗಳು ತಿರುಪತಿ ಆಡಳಿತ ಮಂಡಳಿಯಂತೆ ಇರಲಿದೆ. ಅವರ ಮಾರ್ಗಸೂಚಿಯಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ ಎಂದು ತಿಳಿಸಿದರು.

ಆಗಸ್ಟ್ 6ರಿಂದ ಮುಂಗಾರು ಅಧಿವೇಶನ

ಆಗಸ್ಟ್ 6ರಿಂದ ಅಧಿವೇಶನ ಕರೆಯಲು ತೀರ್ಮಾನಿಸಲಾಗಿದೆ. ನಾನು ಒಂದು ದಿನ ಕೆಲಸದ ಮೇಲೆ ದೆಹಲಿಗೆ ಹೋಗಿ ಬರುತ್ತೇನೆ. ನಂತರ ನಮ್ಮ ನಾಯಕರು ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮೂರ್ನಾಲ್ಕು ದಿನಗಳಲ್ಲಿ ದಿನಾಂಕ ನಿಗದಿ ಮಾಡುತ್ತಾರೆ. ನಂತರ ನಾನು ದೆಹಲಿಗೆ ಹೋಗುವೆ ಎಂದು ಮಾಹಿತಿ ನೀಡಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular