HomeKarnatakaBREAKING : ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಹಲ್ಲೆ ಆರೋಪ ; ಬೆಂಗಳೂರಲ್ಲಿ PSI ಭೈರಪ್ಪ ಅರೆಸ್ಟ್.!

BREAKING : ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಹಲ್ಲೆ ಆರೋಪ ; ಬೆಂಗಳೂರಲ್ಲಿ PSI ಭೈರಪ್ಪ ಅರೆಸ್ಟ್.!

ಬೆಂಗಳೂರು: ಸಾರ್ವಜನಿಕರ ರಕ್ಷಣೆಗಾಗಿ ಕರ್ತವ್ಯ ನಿರ್ವಹಿಸಬೇಕಾದ ಪೊಲೀಸ್ ಸಬ್‌ ಇನ್‌ಸ್ಪೆಕ್ಟರ್‌ (ಪಿಎಸ್‌ಐ) ಅವರೇ ಪತ್ನಿಯ ಕೊಲೆಗೆ ಯತ್ನಿಸಿ, ವರದಕ್ಷಿಣೆಗಾಗಿ ಕಿರುಕುಳ ನೀಡಿದ ಆರೋಪದಡಿ ಬಂಧನಕ್ಕೊಳಗಾಗಿದ್ದಾರೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್‌ಐ ಭೈರಪ್ಪ ಅವರನ್ನು ಕೆಂಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಹೌದು. ಸಾರ್ವಜನಿಕರ ಸುರಕ್ಷತೆ ಕಾಪಾಡಬೇಕಿದ್ದ ಪೊಲೀಸ್ ಸಬ್‌ ಇನ್‌ಸ್ಪೆಕ್ಟರ್‌ (ಪಿಎಸ್‌ಐ) ಅವರೇ ಪತ್ನಿಯ ಕೊಲೆಗೆ ಯತ್ನಿಸಿ, ವರದಕ್ಷಿಣೆಗಾಗಿ ಕಿರುಕುಳ ನೀಡಿದ ಗಂಭೀರ ಆರೋಪದಡಿ ಬಂಧನಕ್ಕೊಳಗಾಗಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್‌ಐ ಭೈರಪ್ಪ ಅವರನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದು, ಕೊಲೆ ಯತ್ನ, ವರದಕ್ಷಿಣೆ ಕಿರುಕುಳ ಹಾಗೂ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, ಭೈರಪ್ಪ ಅವರು ಕಳೆದ ಕೆಲವು ತಿಂಗಳುಗಳಿಂದ ಪತ್ನಿಗೆ ವರದಕ್ಷಿಣೆಗಾಗಿ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಇತ್ತೀಚೆಗೆ ಕೌಟುಂಬಿಕ ಕಲಹ ತೀವ್ರಗೊಂಡ ವೇಳೆ ಮನೆಯಲ್ಲಿದ್ದ ಮಚ್ಚು ಹಿಡಿದು ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಲು ಯತ್ನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನೆಯ ಬಳಿಕ ಸಂತ್ರಸ್ತೆ ಕೆಂಗೇರಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಆರಂಭದಲ್ಲಿ ಎನ್‌ಸಿಆರ್‌ ದಾಖಲಿಸಲಾಗಿತ್ತು. ಬಳಿಕ ಪ್ರಾಥಮಿಕ ತನಿಖೆಯಲ್ಲಿ ಗಂಭೀರ ಆರೋಪಗಳು ದೃಢಪಟ್ಟ ಹಿನ್ನೆಲೆಯಲ್ಲಿ ಎಫ್‌ಐಆರ್‌ ದಾಖಲಿಸಿ ಭೈರಪ್ಪ ಅವರನ್ನು ಬಂಧಿಸಲಾಗಿದೆ.

ಆರೋಪಿ ವಿರುದ್ಧ ಕೊಲೆ ಯತ್ನ, ವರದಕ್ಷಿಣೆ ಕಿರುಕುಳ ಹಾಗೂ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಈ ಘಟನೆ ಪೊಲೀಸ್ ಇಲಾಖೆಗೆ ತೀವ್ರ ಮುಜುಗರ ಉಂಟುಮಾಡಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular