ಮಂಗಳೂರು: ಮಂಗಳೂರು ನಗರದ ಹೊರವಲಯದ ಸುರತ್ಕಲ್ ಬಳಿ ನಾಲ್ಕನೇ ಮಹಡಿಯಿಂದ ಜಿಗಿದು ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹುಬ್ಬಳ್ಳಿ ಮೂಲದ ಎಂಬಿಬಿಎಸ್ ವಿದ್ಯಾರ್ಥಿನಿ ಮಹಾಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಮಹಾಲಕ್ಷ್ಮಿ ಸುರತ್ಕಲ್ ನ ಮುಕ್ಕದ ಖಾಸಗಿ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿಯಾಗಿದ್ದಾರೆ. ಖಾಸಗಿ ಅಪಾರ್ಟ್ಮೆಂಟ್ ನ ನಾಲ್ಕನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ನೇಹಿತೆಯ ಜೊತೆಗೆ ಅಪಾರ್ಟ್ಮೆಂಟ್ ನಲ್ಲಿ ಮಹಾಲಕ್ಷ್ಮಿ ವಾಸಿಸುತ್ತಿದ್ದರು. ಮಹಾಲಕ್ಷ್ಮಿ ಖಿನ್ನತೆಗೆ ಒಳಗಾಗಿದ್ದರು ಎಂದು ಹೇಳಲಾಗಿದೆ. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

