ಕಲಬುರಗಿ: ಕಲಬುರಗಿಯಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರಿಂದ ಗುಂಡಿನ ಸದ್ದು ಮೊಳಗಿದೆ. ಜೈಲಿನಿಂದ ಪರಾರಿಯಾಗಿದ್ದ ಆರೋಪಿಯ ಕಾಲಿಗೆ ಗುಂಡು ಹಾರಿಸಲಾಗಿದೆ.
ಕೈದಿ ಸಂತೋಷ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಜೈಲಿನಿಂದ ಪರಾರಿಯಾಗಿದ್ದ ಕೈದಿ ಸಂತೋಷ್ ನನ್ನು ಬಂಧಿಸಲು ಪೊಲೀಸರು ತೆರಳಿದ್ದರು. ಈ ವೇಳೆ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿ ಪರಾರಿಯಾಗಲು ಮುಂದಾಗಿದ್ದು, ಆತ್ಮರಕ್ಷಣೆಗಾಗಿ ಸಂತೋಷ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಕೈದಿ ಸಂತೋಷ್ ನನ್ನು ವಶಕ್ಕೆ ಪಡೆದಿರುವ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಜೈಲಿಂದ ಪರಾರಿಯಾಗಿದ್ದ ಮೂವರು ಕೈದಿಗಳ ಪತ್ತೆಗೆ ಪೊಲೀಸರು ನಾಕಾಬಂಧಿ ಹಾಕಿದ್ದು, ಇಂಡಸ್ಟ್ರಿಯಲ್ ಎಸ್ಟೇಟ್ ನಲ್ಲಿ ಸಂತೋಷ್ ಅವಿತಿರುವ ಮಾಹಿತಿ ತಿಳಿದು ಬಂಧನಕ್ಕೆ ತೆರಳಿದ್ದರು. ಶರಣಾಗುವಂತೆ ಎಚ್ಚರಿಕೆ ನೀಡಿದರೂ ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾದಾಗ ಫೈರಿಂಗ್ ಮಾಡಲಾಗಿದೆ. ಉಳಿದ ಇಬ್ಬರ ಬಂಧನಕ್ಕೆ ಬಲೆ ಬೀಸಲಾಗಿದೆ.

