ಧಾರವಾಡ : ಧಾರವಾಡ ನಗರದ ಉಚ್ಚ ನ್ಯಾಯಾಲಯದ ಆವರಣದಲ್ಲಿ ಶಿಶುಪಾಲನಾ ಕೇಂದ್ರವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಾರಂಭಿಸಲಾಗುತ್ತಿದ್ದು, ಸದರಿ ಕೇಂದ್ರದಲ್ಲಿ ಕೆಲಸ ನಿರ್ವಹಿಸಲು ಒಂದು ಶಿಕ್ಷಕಿ ಮತ್ತು ಇಬ್ಬರು ಸಹಾಯಕಿಯರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಶಿಕ್ಷಕಿ ಹುದ್ದೆಗೆ ಪದವಿ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಎನ್.ಟಿ.ಸಿ ತರಬೇತಿ ಹೊಂದಿದವರಿಗೆ ಆದ್ಯತೆ ನೀಡಲಾಗುವುದು. ಸಹಾಯಕಿ ಹುದ್ದೆಗೆ 10 ನೇ ತರಗತಿ ಪಾಸಾದವರಾಗಿಬೇಕು. (ಸ್ಥಳಿಯ ಮಹಿಳೆಯರು, ಕೇಂದ್ರಕ್ಕೆ ಹತ್ತಿರ ಇರುವ 20 ರಿಂದ 40 ವರ್ಷದೊಳಗಿನ ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಜುಲೈ 22, 2026 ಸಂಜೆ 5.30 ರೊಳಗಾಗಿ ಅರ್ಜಿಗಳನ್ನು ಧಾರವಾಡ ಉಪನಿರ್ದೇಶಕರ ಕಚೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಲ್ಲಿ ಖುದ್ದಾಗಿ ಸಲ್ಲಿಸಬೇಕು. ಶಿಕ್ಷಕಿಯರಿಗೆ ಗೌರವಧನ ರೂ.10,000 ಹಾಗೂ ಸಹಾಯಕಿಯರಿಗೆ ರೂ,6000 ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂ: 0836-2447850 ಕ್ಕೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಷ್ಟ್ರೀಯ ಪ್ರಧಾನ ಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ಧಾರವಾಡ : ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಮಂತ್ರಾಲಯ ಭಾರತ ಸರ್ಕಾರದಿಂದ 2026 ನೇ ಸಾಲಿನ ರಾಷ್ಟ್ರೀಯ ಪ್ರಧಾನ ಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಧಾರವಾಡ ಜಿಲ್ಲೆಯಲ್ಲಿ ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಕ್ಷಿಸಿದ ಹಾಗೂ ಕ್ರೀಡೆ, ಸಮಾಜ ಸೇವೆ, ತಂತ್ರಜ್ಞಾನ, ಕಲೆ, ಸಂಸ್ಕøತಿ, ಪರಿಸರ ಸಂರಕ್ಷಣೆ, ಮತ್ತು ನೂತನ ಆವಿಷ್ಕಾರಗಳನ್ನು ಮಾಡಿ ಉತ್ತಮ ಸಾಹಸ ಮಾಡಿದಂತಹ 05 ವರ್ಷ ಮೇಲ್ಪಟ್ಟ 18 ವರ್ಷ (as on 31-07-2026) ಮಕ್ಕಳು ಆನ್‍ಲೈನ್ ವೆಬ್‍ಸೈಟ್ ಮೂಲಕ Rashtriya Puraskar Portal on https://awards.gov.in ಮೂಲಕ ಜುಲೈ 31, 2026 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿRashtriya Puraskar Portalನ್ನು ಅನುಸರಿಸುವುದು ಅಥವಾ ಧಾರವಾಡ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ದೂರವಾಣಿ ಸಂಖ್ಯೆ: 0836-2742420 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

