ಕಲಬುರಗಿ ಕೇಂದ್ರ ಕಾರಾಗೃಹದಿಂದ ಕೈದಿಗಳ ಪರಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪೋಸ್ಟ್ ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿರುಗೇಟು ನೀಡಿದ್ದಾರೆ.
ಐಸಿಸ್ ಉಗ್ರನಿಗೆ ರಾಜಾತಿಥ್ಯ ನೀಡಿದ ಮಹಾನ ಸರ್ಕಾರದ ಮಹಾನ್ ಗೃಹ ಸಚಿವರೇ, ನೀವು ಆರ್ ಎಸ್ ಎಸ್ ಬಗ್ಗೆ ಚಿಂತೆ ಮಾಡುವುದನ್ನು ಬಿಡಿ. ನಿಮ್ಮ ತವರು ಜಿಲ್ಲೆಯಲ್ಲಿಯೇ ಜೈಲಿನಿಂದ ಕೈದಿಗಳು ತಪ್ಪಿಸಿಕೊಂಡಿದ್ದು ನಿಮ್ಮ ಆಡಳಿತಕ್ಕೆ ಹಿಡಿದ ಕೈಗನ್ನಡಿ ಎಂದು ಟೀಕಿಸಿದ್ದಾರೆ.
2010ರಲ್ಲಿ ಆಯಿತು ಅಂತ ಈಗ ನೀವು ಜೈಲಿನಿಂದ ತಪ್ಪಿಸಿಕೊಳ್ಳಲು ಬಿಟ್ಟಿದ್ದೀರಾ? ನಿಮ್ಮ ವೈಪಲ್ಯ ಮರೆ ಮಾಚಲು ಕಾಗಕ್ಕ ಗುಬ್ಬಕ್ಕ ಕಥೆ ಹೇಳಬೇಡಿ… ಪಾಪ, ನಿಮಗೆ RSS ಬಗ್ಗೆ ಅಧ್ಯಯನ ಮಾಡೋಕೆ ಸಮಯ ಸಿಗುತ್ತಿಲ್ಲ, ಇನ್ನೂ ಜೈಲು, ಕಾನೂನು ಸುವವ್ಯಸ್ಥೆ ಕಾಪಾಡೋಕೆ ಸಮಯ ಎಲ್ಲಿದೆ ಸ್ವಾಮಿ ಎಂದು ಪ್ರಶ್ನಿಸಿದ್ದಾರೆ.
ಮಹತ್ವದ ಇಲಾಖೆಯ ಜವಾಬ್ದಾರಿ ಹೊತ್ತಿರುವ ತಾವು ಈ ರೀತಿ ಬೇಜವಾಬ್ದಾರಿ ಹೇಳಿಕೆ ನೀಡುವುದು ನಿಮ್ಮ ಯೋಗ್ಯತೆಯನ್ನು ತೋರಿಸುತ್ತದೆ. ತಮ್ಮ ಸರ್ಕಾರದ ಮೂರು ವರ್ಷಗಳ ಅವಧಿಯಲ್ಲಿ ಜೈಲಿನಲ್ಲಿ ಏನೇನಾಗಿತ್ತು ಎನ್ನುವದು ಇಡೀ ದೇಶದ ಜನತೆಗೆ ಗೊತ್ತಿದೆ. ಮಿಸ್ಟರ್ ಹೋಮ್ ಮಿನಿಸ್ಟರ್… ನಾಚಿಕೆ ಆಗಬೇಕು ನಿಮಗೆ ಈ ರೀತಿಯ ಬೇಜವಾಬ್ದಾರಿ ಹೇಳಿಕೆ ನೀಡೋಕೆ ಎಂದು ವಿಜಯೇಂದ್ರ ತಿಳಿಸಿದ್ದಾರೆ.

