HomeKarnatakaBREAKING : 'ಪಬ್'ನಲ್ಲಿ ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ ; ಇನ್ಫ್ಲೊಯೆನ್ಸರ್ 'ಅಮುಕು ಡುಮುಕು'...

BREAKING : ‘ಪಬ್’ನಲ್ಲಿ ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ ; ಇನ್ಫ್ಲೊಯೆನ್ಸರ್ ‘ಅಮುಕು ಡುಮುಕು’ ವಿರುದ್ಧ FIR ದಾಖಲು.!

ಬೆಂಗಳೂರು: ಪಬ್ ನಲ್ಲಿ   ಮಹಿಳಾ ಸಿಬ್ಬಂದಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಹಿನ್ನೆಲೆಯಲ್ಲಿ ಸೋಷಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಮಂಜು ಅಲಿಯಾಸ್ ‘ಅಮುಕು ಡುಮುಕು’ ವಿರುದ್ಧ ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಜುಲೈ 9ರಂದು ರಾತ್ರಿ ಸುಮಾರು 9.20ರ ವೇಳೆಗೆ ಮಂಜು ಅಲಿಯಾಸ್ ‘ಅಮುಕು ಡುಮುಕು ರೆಸ್ಟೋ ಬಾರ್ ಅಂಡ್ ಪಬ್ಗೆ ಪ್ರಚಾರದ ನೆಪದಲ್ಲಿ ಬಂದಿದ್ದನು, ಆಹಾರ ಮತ್ತು ಮದ್ಯ ಸೇವಿಸಿದ ಬಳಿಕ ಬಿಲ್ ಪಾವತಿಸದೆ ತೆರಳಲು ಯತ್ನಿಸಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಇದೇ ವೇಳೆ ಮಹಿಳಾ ಸಿಬ್ಬಂದಿಯೊಬ್ಬರ ಕೈ ಹಿಡಿದು ತನ್ನತ್ತ ಎಳೆದು ಅಸಭ್ಯವಾಗಿ ಮಾತನಾಡಿದ್ದಾನೆ ಎನ್ನಲಾಗಿದೆ. ಈ ಘಟನೆಯಿಂದ ಬೆಚ್ಚಿಬಿದ್ದ ಸಿಬ್ಬಂದಿ ಕೂಡಲೇ ಪಬ್ ವ್ಯವಸ್ಥಾಪಕರಿಗೆ ಮಾಹಿತಿ ನೀಡಿದ್ದಾರೆ.

ಇದಾದ ಬಳಿಕ ಮತ್ತೊಬ್ಬ ಮಹಿಳಾ ಸಿಬ್ಬಂದಿಗೆ ತನ್ನೊಂದಿಗೆ ಸೆಲ್ಫಿ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾನೆ. ಆಕೆ ನಿರಾಕರಿಸಿದಾಗ ನಿಂದಿಸಿ, ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಲ್ಲದೇ  ಮಂಜು ಬಾರ್  ಮ್ಯಾನೇಜರ್ ಗೆ ಮೇಲೆ ಕೂಡ ಹಲ್ಲೆಗೆ ಯತ್ನಿಸಿ ಕೊಲೆ ಬೆದರಿಕೆ  ಹಾಕಿದ್ದಾನೆ. ಮಂಜು ತನ್ನ ಸ್ನೇಹಿತರೊಂದಿಗೆ ಪಬ್‌ಗೆ ಬಂದಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.  ಈ ದೂರಿನ ಆಧಾರದ ಮೇಲೆ ಅನ್ನಪೂರ್ಣೇಶ್ವರಿನಗರ ಪೊಲೀಸರು ಮಂಜು ಹಾಗೂ ಆತನ ಸ್ನೇಹಿತರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.

‘ಅಮುಕು ಡುಮುಕು’ ರೀಲ್ಸ್

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular