HomeKarnataka‘ಗೃಹಲಕ್ಷ್ಮಿ’ ಫಲಾನುಭವಿಗಳಿಗೆ ಗುಡ್ ನ್ಯೂಸ್: ಖಾತೆಗೆ 31ನೇ ಕಂತಿನ ಹಣ ಜಮಾ

‘ಗೃಹಲಕ್ಷ್ಮಿ’ ಫಲಾನುಭವಿಗಳಿಗೆ ಗುಡ್ ನ್ಯೂಸ್: ಖಾತೆಗೆ 31ನೇ ಕಂತಿನ ಹಣ ಜಮಾ

ಬೆಂಗಳೂರು: ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ ಹಣವನ್ನು ಪಲಾನುಭವಿಗಳ ಖಾತೆಗೆ ವರ್ಗಾಯಿಸಲು 2400 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.

ಇದುವರೆಗೆ ರಾಜ್ಯದ 1.24 ಕೋಟಿ ಫಲಾನುಭವಿಗಳಾದ ಮನೆ ಯಜಮಾನಿಯರಾದ ಬ್ಯಾಂಕ್ ಖಾತೆಗೆ 30 ಕಂತುಗಳಲ್ಲಿ ತಲಾ ಎರಡು ಸಾವಿರ ರೂ.ಗಳಂತೆ 60 ಸಾವಿರ ರೂ.ಗಳನ್ನು ಡಿಪಿಟಿ ಮೂಲಕ ಜಮಾ ಮಾಡಲಾಗಿತ್ತು.

ಇದೀಗ 31ನೇ ಕಂತಿನ ಹಣವನ್ನು ಪಾವತಿಸಲು 2400 ಕೋಟಿ ರೂ.ಗಳನ್ನು ಸರ್ಕಾರ ಸಂಬಂಧಿಸಿದ ಇಲಾಖೆಗೆ ಬಿಡುಗಡೆ ಮಾಡಿದೆ. ಈ ಮೂಲಕ ಗೃಹಲಕ್ಷ್ಮಿ ಯೋಜನೆಗಾಗಿ ರಾಜ್ಯ ಸರ್ಕಾರ ಇದುವರೆಗೆ 74,650 ಕೋಟಿ ರೂಪಾಯಿ ವ್ಯಯಿಸಿದ್ದು, ಫಲಾನುಭವಿಗಳ ಖಾತೆಗೆ ಒಟ್ಟು 62 ಸಾವಿರ ರೂ. ಪಾವತಿಸಿದಂತಾಗುತ್ತದೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಮತ್ತು ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular