HomeKarnatakaಉಚಿತ ವಿದ್ಯುತ್ ಸೌಲಭ್ಯ: ಗೃಹಜ್ಯೋತಿ ಯೋಜನೆ ಫಲಾನುಭವಿಗಳಿಗೆ ಮುಖ್ಯ ಮಾಹಿತಿ

ಉಚಿತ ವಿದ್ಯುತ್ ಸೌಲಭ್ಯ: ಗೃಹಜ್ಯೋತಿ ಯೋಜನೆ ಫಲಾನುಭವಿಗಳಿಗೆ ಮುಖ್ಯ ಮಾಹಿತಿ

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ ಮನೆ ದಾಖಲೆ ಪರಿಶೀಲನಾ ಕಾರ್ಯವು ಈಗಾಗಲೇ ಆರಂಭಗೊಂಡಿದೆ.

ಸೆಸ್ಕ್ ವ್ಯಾಪ್ತಿಯ ನೌಕರರು ಗ್ರಾಹಕರ ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಪಡೆಯಲಿದ್ದಾರೆ. ಗೃಹಜ್ಯೋತಿ ಯೋಜನೆಯ ಅರ್ಹತೆ ಮರುಪರಿಶೀಲಿಸುವ ಉದ್ದೇಶದಿಂದ ಇಂಧನ ಇಲಾಖೆ ಈ ಮಹತ್ವದ ಕಾರ್ಯಕ್ಕೆ ಮುಂದಾಗಿದೆ.

ಗ್ರಾಹಕರ ಮೂಲ ದಾಖಲೆಗಳನ್ನು ಸ್ಥಳದಲ್ಲಿಯೇ ಪರಿಶೀಲಿಸಿ ಬಳಿಕ ವಿಶೇಷ ಮೊಬೈಲ್ ಆಪ್ ಹಾಗೂ ಅಧಿಕೃತ ಘೋಷಣಾ ಪತ್ರದ ಮೂಲಕ ಹೊಸದಾಗಿ ಮಾಹಿತಿ ಸಂಗ್ರಹಿಸಿ ಅರ್ಜಿ ಭರ್ತಿ ಮಾಡುವ ಪ್ರಕ್ರಿಯೆಯನ್ನು ಸ್ಥಳದಲ್ಲಿಯೇ ಪೂರ್ಣಗೊಳಿಸುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಪ್ರಕ್ರಿಯೆಗೆ ಮೀಟರ್ ರೀಡರ್ ಮೂಲಕ ಸ್ಥಳದಲ್ಲಿಯೇ ತಪಾಸಣೆ ಮಾಡುವುದು ಏಕೈಕ ಮಾರ್ಗವಾಗಿದ್ದು, ಸಾರ್ವಜನಿಕರು ಸೆಸ್ಕ್ ಸಿಬ್ಬಂದಿಗೆ ಮಾಹಿತಿ ನೀಡುತ್ತಿದ್ದಾರೆ.

ಮನೆ ಮನೆಗೆ ಭೇಟಿ ಸಂದರ್ಭದಲ್ಲಿ ಫಲಾನುಭವಿಗಳು ಆಧಾರ್ ಕಾರ್ಡ್ ಇತ್ತೀಚಿನ ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ, ಮತದಾರರ ಗುರುತಿನ ಚೀಟಿ ಪಾನ್ ಕಾರ್ಡ್, ರೇಷನ್ ಕಾರ್ಡ್, ಪಡಿತರ ಚೀಟಿ ಮತ್ತಿತರ ದಾಖಲೆಗಳನ್ನು ನೀಡಿ ಗೃಹಜ್ಯೋತಿ ಯೋಜನೆ ಪರಿಷ್ಕರಣಾ ಕಾರ್ಯಕ್ಕೆ ಕೈಜೋಡಿಸುವ ಕಾರ್ಯ ನಡೆದಿದೆ ಎಂದು ಸೆಸ್ಕ್ ಇಇ ರಾಮಚಂದ್ರ ಅವರು ತಿಳಿಸಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಗೃಹಜ್ಯೋತಿ ಯೋಜನೆ ಪಡೆದಿರುವ 1,47,812 ಕುಟುಂಬಗಳಲ್ಲಿ 31,255 ಕುಟುಂಬಗಳ ಸರ್ವೆ ಕಾರ್ಯ ನಡೆದಿದ್ದು, ಶೇ.21.15 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಸೆಸ್ಕ್ ಇಇ ರಾಮಚಂದ್ರ ಅವರು ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular