HomeKarnatakaರಾಜ್ಯದ ಜನತೆಗೆ ಗುಡ್ ನ್ಯೂಸ್: ಗ್ರಾಮೀಣ ಆಸ್ತಿಗಳಿಗೆ ಬಿ ಖಾತೆ, ಮನೆ ಬಾಗಿಲಿಗೆ ಇ -ಸ್ವತ್ತು...

ರಾಜ್ಯದ ಜನತೆಗೆ ಗುಡ್ ನ್ಯೂಸ್: ಗ್ರಾಮೀಣ ಆಸ್ತಿಗಳಿಗೆ ಬಿ ಖಾತೆ, ಮನೆ ಬಾಗಿಲಿಗೆ ಇ -ಸ್ವತ್ತು ತಲುಪಿಸಲು ಮಹತ್ವದ ಕ್ರಮ

ಬೆಂಗಳೂರು: ಗ್ರಾಮೀಣ ಜನರು ಇ- ಸ್ವತ್ತು ಪಡೆಯಲು ಪಂಚಾಯಿತಿ ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಮನೆ ಬಾಗಿಲಿಗೆ ಇ- ಸ್ವತ್ತು ನೀಡುವ ಸಂಬಂಧ ಇ- ಸ್ವತ್ತು ಪ್ರಕ್ರಿಯೆಯಲ್ಲಿನ ತೊಡಕುಗಳ ನಿವಾರಣೆಗೆ ಪಂಚ ಸದಸ್ಯರ ಸಮಿತಿ ರಚಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.

ತಂತ್ರಾಂಶ ಮತ್ತು ಸರ್ವರ್ ಸಮಸ್ಯೆಯಿಂದ ಸಾವಿರಾರು ಇ- ಸ್ವತ್ತು ಅರ್ಜಿಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಪಂಚಾಯತ್ ರಾಜ್ ಕಾರ್ಯದರ್ಶಿಯಾಗಿ ಡಿ. ರಂದೀಪ್ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರು, ಮಂಗಳೂರು, ಕಲಬುರಗಿ ಮತ್ತು ಬೆಳಗಾವಿ ಜಿಲ್ಲೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಿ 10 ದಿನಗಳ ಒಳಗೆ ನಿಯಮಗಳಿಗೆ ಯಾವ ಬದಲಾವಣೆ ತರಬಹುದು ಎನ್ನುವ ಸ್ಪಷ್ಟ ವರದಿ ನೀಡಲು ಸೂಚಿಸಿದ್ದಾರೆ.

ರಾಜ್ಯದ ಗ್ರಾಮ ಠಾಣಾ ಪ್ರದೇಶದಲ್ಲಿ ಹಲವು ದಶಕ ಮತ್ತು ತಲೆಮಾರುಗಳಿಂದ ವಾಸಿಸುತ್ತಿರುವ ಬಹುತೇಕ ನಿವಾಸಿಗಳ ಬಳಿ ತಮ್ಮ ಸ್ವತ್ತಿನ ದಾಖಲಾತಿಗಳು ಇಲ್ಲದ ಕಾರಣದಿಂದ ಅವರಿಗೆ ಇ- ಸ್ವತ್ತು ಪಡೆಯಲು ಸಾಧ್ಯವಾಗುತ್ತಿಲ್ಲ. ಇದರಿಂದ ಬ್ಯಾಂಕ್ ಸಾಲ ಸಿಗುತ್ತಿಲ್ಲ, ಮನೆ ದುರಸ್ತಿ, ಪುನರ್ ನಿರ್ಮಾಣ, ಕಟ್ಟಡ ನಕ್ಷೆ ಪಡೆಯಲು, ಸ್ವತ್ತು ಮಾರಾಟ ಮಾಡಲು ಅವರಿಗೆ ಸಾಧ್ಯವಾಗುತ್ತಿಲ್ಲ. ಈ ನಿಟ್ಟಿನಲ್ಲಿ ಮನೆ ಸಮೀಕ್ಷೆ ಮಾಡಿ ಸಮಸ್ಯೆ ಪರಿಹರಿಸಲು ಮಾರ್ಗೋಪಾಯ ಸೂಚಿಸುವಂತೆ ತಿಳಿಸಿದ್ದಾರೆ. ಗ್ರಾಮ ಠಾಣಾ ವ್ಯಾಪ್ತಿಯವರೆಗೆ ಭೂ ಪರಿವರ್ತಿತ ಮತ್ತು ಭೂ ಪರಿವರ್ತನೆ ಆಗದ ಕಂದಾಯ ಭೂಮಿಯಲ್ಲಿ ಬಡಾವಣೆ ಕಟ್ಟಡಗಳು ತಲೆಯೆತ್ತಿದ್ದು, ಬಿ ಖರಾಬು ಮತ್ತು ಗೋಮಾಳದಂತಹ ಸರ್ಕಾರಿ ಭೂಮಿಯನ್ನು ಸೇರಿಸಿಕೊಂಡು ಬಡಾವಣೆ ಮಾಡಿರುವ ನಿಟ್ಟಿನಲ್ಲಿ 11ಬಿ ನಮೂನೆ ನೀಡಲು ಸಾಧ್ಯವಾಗುವುದಿಲ್ಲ. ಜೊತೆಗೆ ಮೂಲ ಸೌಕರ್ಯಗಳಾದ ರಸ್ತೆ, ನೀರು, ಚರಂಡಿ, ಬೀದಿ ದೀಪ, ಮೊದಲಾದ ಸೌಲಭ್ಯಗಳನ್ನು ಗ್ರಾಮ ಪಂಚಾಯಿತಿಗಳು ಒದಗಿಸಿದ್ದರೂ ತೆರಿಗೆ ಪಡೆಯಲಾಗುತ್ತಿಲ್ಲ. ಈ ನಿಟ್ಟಿನಲ್ಲಿ ಮೇಲಿನ ಎಲ್ಲ ಸಮಸ್ಯೆಗಳನ್ನು ನಿವಾರಿಸಿ ಎಲ್ಲ ಗ್ರಾಮೀಣ ಆಸ್ತಿಗಳಿಗೆ ಸುಗಮವಾಗಿ ಇ- ಸ್ವತ್ತು ನೀಡುವ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸುವಂತೆ ಸಚಿವ ಈಶ್ವರ್ ಖಂಡ್ರೆ ಸೂಚಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular