ಬೆಂಗಳೂರು: ರೌಡಿ ಚಟುವಟಿಕೆಗಳನ್ನು ನಿಯಂತ್ರಿಸುವ ಉದ್ದೇಶದಿಂದ ಬೆಂಗಳೂರಿನ ರೌಡಿಶೀಟರ್ ಗಳ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ವೈಟ್ ಫೀಲ್ಡ್ ವಿಭಾಗದ ಡಿಸಿಪಿ ಸೈದುಲ್ಲಾ ಅಡಾವತ್ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಅಪರಾಧ ಹಿನ್ನೆಲೆಯುಳ್ಳ ರೌಡಿಶೀಟರ್ ಗಳ ಮನೆಗಳಲ್ಲಿ ಪರಿಶೀಲನೆ ನಡೆಸಲಾಗಿದೆ.
ರಾತ್ರಿ 12 ಗಂಟೆಯಿಂದ 3 ಗಂಟೆಯವರೆಗೆ ರೌಡಿ ಶೀಟರ್ ಗಳ ಮನೆಗಳಲ್ಲಿ ಪರಿಶೀಲನೆ ನಡೆಸಲಾಗಿದೆ. ಒಟ್ಟು 140 ಸಿಬ್ಬಂದಿಯ 28 ಪೊಲೀಸರ ತಂಡಗಳು ಏಕಕಾಲಕ್ಕೆ ದಾಳಿ ಮಾಡಿವೆ. ನಗರದ 150ಕ್ಕೂ ಹೆಚ್ಚು ರೌಡಿಶೀಟರ್ ಗಳ ಮನೆಗಳಲ್ಲಿ ಪರಿಶೀಲನೆ ನಡೆಸಲಾಗಿದೆ.
ವರ್ತೂರು, ಕೆಆರ್ ಪುರಂ, ಆವಲಹಳ್ಳಿ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ರೌಡಿಶೀಟರ್ ಗಳ ಮನೆಗಳಲ್ಲಿ ಪರಿಶೀಲನೆ ನಡೆಸಲಾಗಿದೆ. ಸರಿಯಾದ ದಾಖಲೆ ಇಲ್ಲದ 13 ವಾಹನಗಳನ್ನು ಜಪ್ತಿ ಮಾಡಲಾಗಿದೆ. ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಲಾಗಿದೆ. ರೌಡಿಶೀಟರ್ ಗಳ ಮನೆ, ವಿಳಾಸ, ಪೂರ್ವಪರವನ್ನು ವಿಚಾರಣೆ ಮಾಡಲಾಗಿದೆ. ರಸ್ತೆಯಲ್ಲಿ ತಡೆದು ಕೆಲವು ರೌಡಿಗಳ ವಾಹನಗಳ ತಪಾಸಣೆ ನಡೆಸಲಾಗಿದೆ. ವಿಶೇಷ ಕಾರ್ಯಾಚರಣೆಯಲ್ಲಿ ಎಸಿಪಿ, ಇನ್ಸ್ ಪೆಕ್ಟರ್ ಗಳು ಭಾಗವಹಿಸಿದ್ದರು.

