ಖ್ಯಾತ ನಿರ್ದೇಶಕ ಎಸ್.ಎಸ್. ರಾಜಮೌಳಿ ನಿರ್ದೇಶನದ ಬಹುನಿರೀಕ್ಷಿತ ‘ವಾರಣಾಸಿ’ ಸಿನಿಮಾ ಸದ್ಯ ಚಿತ್ರರಂಗದಲ್ಲಿ ಭಾರಿ ಸದ್ದು ಮಾಡುತ್ತಿದೆ. ಈಗ ಈ ಚಿತ್ರದ ಪ್ರಮುಖ ಪಾತ್ರಧಾರಿ ಪ್ರಿಯಾಂಕಾ ಚೋಪ್ರಾ ಅವರ ಫಸ್ಟ್ ಲುಕ್ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಈ ಚಿತ್ರದಲ್ಲಿ ಅವರು ‘ಮಂದಾಕಿನಿ’ ಎಂಬ ಪ್ರಭಾವಶಾಲಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಅಂತಾರಾಷ್ಟ್ರೀಯ ಮಟ್ಟದ ಪ್ರತಿಷ್ಠಿತ ‘ಎಂಟರ್ಟೈನ್ಮೆಂಟ್ ವೀಕ್ಲಿ’ ಪೋರ್ಟಲ್ನಲ್ಲಿ ಪ್ರಿಯಾಂಕಾ ಚೋಪ್ರಾ ಅವರ ಈ ಹೊಸ ಲುಕ್ ಅನಾವರಣಗೊಂಡಿದೆ. ಇದರಲ್ಲಿ ಅವರು ಆಕ್ಷನ್ ಜಗತ್ತಿಗೆ ಸಿದ್ಧರಾಗಿರುವ ತೀವ್ರ ಹಾಗೂ ರಗಡ್ ಅವತಾರದಲ್ಲಿ ಕಾಣಿಸಿಕೊಂಡಿದ್ದು, ಪ್ರೇಕ್ಷಕರ ಗಮನ ಸೆಳೆದಿದ್ದಾರೆ. ಅವರ ಈ ಹೊಚ್ಚಹೊಸ ರೂಪಾಂತರಕ್ಕೆ ಅಭಿಮಾನಿಗಳಿಂದ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ ಈ ಆಕ್ಷನ್ ಅಡ್ವೆಂಚರ್ ಚಿತ್ರವನ್ನು ರಾಜಮೌಳಿ ಅವರು ಅತ್ಯಂತ ಅದ್ಧೂರಿ ವೆಚ್ಚದಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ನಿರ್ಮಿಸುತ್ತಿದ್ದಾರೆ. ಇಡೀ ಭಾರತೀಯ ಚಿತ್ರರಂಗವೇ ಕುತೂಹಲದಿಂದ ಕಾಯುತ್ತಿರುವ ‘ವಾರಣಾಸಿ’ ಸಿನಿಮಾ 2027ರ ಏಪ್ರಿಲ್ 7 ರಂದು ವಿಶ್ವಾದ್ಯಂತ ಅದ್ದೂರಿಯಾಗಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.
Priyanka chopra as Mandakini from @VaranasiMovie 🔥🔥 @urstrulyMahesh @priyankachopra @ssrajamouli @PrithviOfficial pic.twitter.com/rUkjj5OY9E
— Mahesh Babu Trends ™ (@MaheshFanTrends) July 18, 2026
1st Look at Priyanka Chopra Jonas as Mandakini, a “fierce, globetrotting character who is strong, vulnerable and unforgettable in equal measure.” in the new film #Varanasi from ‘RRR’’s Legendary director SS Rajamouli. LFG!!!!! #PriyankaChopraJonas pic.twitter.com/DmG5lzhe2k
— Charles Fernandez ᴮᴸᴹ #StanJosephineLangford (@movie_charles) July 18, 2026

