ಶಿವಮೊಗ್ಗ: ಕೊಡಚಾದ್ರಿ ಪ್ರವಾಸಕ್ಕೆ ತೆರಳಿದ್ದ ಬೆಂಗಳೂರು ಮೂಲದ ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ದುರ್ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನಲ್ಲಿ ನಡೆದಿದೆ. ಮೃತರನ್ನು ಶ್ರೀಕಾಂತ್ ಎಂದು ಗುರುತಿಸಲಾಗಿದೆ.
ಸ್ನೇಹಿತರೊಂದಿಗೆ ಕೊಡಚಾದ್ರಿಗೆ ಪ್ರವಾಸಕ್ಕೆ ತೆರಳಿದ್ದ ಶ್ರೀಕಾಂತ್ ರಾತ್ರಿ ಕಟ್ಟಿನಹೊಳೆಯಲ್ಲಿರುವ ಸ್ನೇಹಿತನ ಮನೆಯಲ್ಲಿ ತಂಗಿದ್ದರು. ಮರು ದಿನ ಕೊಡಚಾದ್ರಿ ಶಿಖರವನ್ನೇರಿಸಲು ಎಲ್ಲಾ ಸಿದ್ದತೆ ಮಾಡಿಕೊಂಡಿದ್ದರು. ಆದರೆ ರಾತ್ರಿಯೇ ಶ್ರೀಕಾಂತ್ ಗೆ ಧಿಡೀರ್ ಹೃದಯಾಘಾತ ಸಂಭವಿಸಿದೆ.ಕೂಡಲೇ ಆಸ್ಪತ್ರೆಗೆ ಕರೆದೊಯ್ದರೂ, ವೈದ್ಯರು ಪರೀಕ್ಷಿಸಿ ಅವರು ಮೃತಪಟ್ಟಿರುವುದಾಗಿ ಘೋಷಿಸಿದರು.
ಘಟನೆಯ ಮಾಹಿತಿ ತಿಳಿದ ಕೂಡಲೇ ಸ್ಥಳೀಯ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು ಎಂದು ತಿಳಿದುಬಂದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಹೃದಯಾಘಾತವೇ ಸಾವಿಗೆ ಕಾರಣ ಎನ್ನಲಾಗಿದ್ದು, ಮರಣೋತ್ತರ ಪರೀಕ್ಷೆಯ ವರದಿಯ ಬಳಿಕ ನಿಖರ ಕಾರಣ ತಿಳಿಯಲಿದೆ.

