HomeKarnatakaಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ರಾಹುಲ್ ಗಾಂಧಿ ಸಂತಾಪ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ರಾಹುಲ್ ಗಾಂಧಿ ಸಂತಾಪ

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ.

ಮಾಜಿ ಪ್ರಧಾನಿ ಶ್ರೀ ದೇವೇಗೌಡರ ಪತ್ನಿ ಶ್ರೀಮತಿ ಚೆನ್ನಮ್ಮ ಅವರ ನಿಧನದಿಂದ ತೀವ್ರ ನೋವಾಗಿದೆ. ಅವರ ವಿನಮ್ರತೆ ಮತ್ತು ಸಮಾಜ ಸೇವೆಯ ಬಗ್ಗೆ ಅವರ ಉತ್ಸಾಹ ಮೆಚ್ಚುವಂತಹದ್ದಾಗಿತ್ತು. ಈ ದುಃಖದ ಸಮಯದಲ್ಲಿ, ನನ್ನ ಆಲೋಚನೆಗಳು ಶ್ರೀ ದೇವೇಗೌಡರ ಮತ್ತು ಅವರ ಇಡೀ ಕುಟುಂಬದೊಂದಿಗೆ ಇವೆ. ಓಂ ಶಾಂತಿ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಚೆನ್ನಮ್ಮ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. ಬೆಂಗಳೂರಿನ ಪದ್ಮನಾಭನಗರದಲ್ಲಿರುವ ನಿವಾಸದಲ್ಲಿ ಪೂಜಾ ವಿಧಿ ವಿಧಾನ ನೆರವೇರಿಸಿದ ನಂತರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸೋಮವಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular