ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠರಾದ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಮೊಮ್ಮಗ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪೆರೋಲ್ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಪೆರೋಲ್ ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿದೆ. ಪ್ರಜ್ವಲ್ ರೇವಣ್ಣ ಅವರ ಅಜ್ಜಿ ಚೆನ್ನಮ್ಮ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ನಾಳೆ ಪೆರೋಲ್ ನೀಡುವಂತೆ ಕೋರಿ ವಕೀಲರು ಅರ್ಜಿ ಸಲ್ಲಿಸಿದ್ದಾರೆ. ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಅವಕಾಶ ನೀಡುವಂತೆ ಕೋರಿ ಅರ್ಜಿ ಸಲ್ಲಿಸಲಾಗಿದೆ. ಕೋರ್ಟ್ ತೀರ್ಮಾನದ ನಂತರ ಜೈಲಾಧಿಕಾರಿಗಳು ಅಂತ್ಯಕ್ರಿಯೆಗೆ ಕರೆದುಕೊಂಡು ಹೋಗುವ ಸಾಧ್ಯತೆ ಇದೆ.
ಜೀವಿತಾವಧಿ ಜೈಲು ಶಿಕ್ಷೆಗೆ ಗುರಿಯಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ಪ್ರಜ್ವಲ್ ರೇವಣ್ಣ ಕೊನೆಗಾಲದಲ್ಲಿ ಅಜ್ಜಿ ಮುಖ ನೋಡಲು ಸಾಧ್ಯವಾಗಿಲ್ಲ ಎಂದು ಕಣ್ಣೀರಿಟ್ಟಿದ್ದಾರೆ. ಚೆನ್ನಮ್ಮನವರ ಪ್ರೀತಿಯ ಮೊಮ್ಮಗನಾಗಿದ್ದ ಪ್ರಜ್ವಲ್ ರೇವಣ್ಣ ಅಜ್ಜಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಪೆರೋಲ್ ಗೆ ಅರ್ಜಿ ಸಲ್ಲಿಸಿದ್ದಾರೆ.

