HomeKarnatakaನನ್ನ ದೇವರನ್ನೇ ಕಳೆದುಕೊಂಡಿದ್ದೇನೆ: ಬಿಕ್ಕಿ ಬಿಕ್ಕಿ ಅಳುತ್ತಾ ಗೋಳಾಡಿದ ಹೆಚ್.ಡಿ.ರೇವಣ್ಣ

ನನ್ನ ದೇವರನ್ನೇ ಕಳೆದುಕೊಂಡಿದ್ದೇನೆ: ಬಿಕ್ಕಿ ಬಿಕ್ಕಿ ಅಳುತ್ತಾ ಗೋಳಾಡಿದ ಹೆಚ್.ಡಿ.ರೇವಣ್ಣ

ಹಾಸನ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅನಾರೋಗ್ಯದಿಂದ ವಿಧಿವಶರಾಗಿದ್ದು, ನಾಳೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ರಂಗನಾಥ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಚೆನ್ನಮ್ಮ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ. ತಾಯಿ ಚೆನ್ನಮ್ಮ ಅವರ ಅಂತ್ಯಕ್ರಿಯೆ ನಡೆಯಲಿರುವ ಜಾಗವನ್ನು ಶಾಸಕ ಹೆಚ್​​.ಡಿ. ರೇವಣ್ಣ ಪರಿಶೀಲನೆ ನಡೆಸಿದ್ದಾರೆ.

ಈ ವೇಳೆ ಮಾತನಾಡಿದ ಶಾಸಕ ರೇವಣ್ಣ, ಅಮ್ಮನನ್ನು ನೆನೆದು ಭಾವುಕರಾದರು. ತಾಯಿ ಚೆನ್ನಮ್ಮ ನನಗೆ ದೇವತೆ ಸಮಾನ. ನಾನು ನನ್ನ ದೇವರನ್ನೇ ಕಳೆದುಕೊಂಡಿದ್ದೇನೆ ಎಂದು ಬಿಕ್ಕಿಬಿಕ್ಕಿ ಅತ್ತಿದ್ದಾರೆ. ಗೋಳಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಷ್ಟೋ ಜನರಿಗೆ ಅನ್ನ ಹಾಕಿದ ಕೈ ಅವರದ್ದು. ಕೊನೆಯದಾಗಿ ತಿರುಪತಿ ಪ್ರಸಾದ ಕೊಟ್ಟು ಮಾತನಾಡಿಸಿದ್ದೆ. ವೈದ್ಯರು ನಿನ್ನೆ ಬೆಳಗ್ಗೆ ಅಮ್ಮ ಚೆನ್ನಮ್ಮ ಗುಣಮುಖ ಆಗ್ತಾರೆ ಎಂದಿದ್ದರು. ಆದರೆ ಅವರು ಬದುಕಿಬರಲಿಲ್ಲ ಎಂದು ಹೇಳುತ್ತಲೇ ಉಮ್ಮಳಿಸಿ ಬಂದ ದುಃಖ ತಡೆಯಲಾರದೆ ರೇವಣ್ಣ ಕಣ್ಣೀರಿಟ್ಟಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular