ಬೆಂಗಳೂರು: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ 2026 -27 ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಧನ ಸಹಾಯಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಮಂಡಳಿಯ ನಿಯಮಾವಳಿಗಳ ಪ್ರಕಾರ ನೋಂದಾಯಿತ ಕಾರ್ಮಿಕರ ಇಬ್ಬರು ಮಕ್ಕಳಿಗೆ ವಾರ್ಷಿಕವಾಗಿ ಶೈಕ್ಷಣಿಕ ಸಹಾಯಧನ ನೀಡಲಾಗುವುದು. ಸದ್ಯ ರಾಜ್ಯ ಆರ್ಥಿಕ ವೇತನ ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ.
ಅರ್ಹ ಫಲಾನುಭವಿಗಳು ಈ ಸೌಲಭ್ಯವನ್ನು ಪಡೆದುಕೊಳ್ಳಲು ಎಸ್ಎಸ್ಪಿ ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಬಹುದು. ಪ್ರಸಕ್ತ ಸಾಲಿನಲ್ಲಿ ಧನ ಸಹಾಯಕ್ಕೆ ಅರ್ಜಿ ಸಲ್ಲಿಸುವ ಕಾರ್ಮಿಕರು ಮಂಡಳಿಯ ಕಾರ್ಮಿಕ ಸೇವಾ ಕೇಂದ್ರ ತಂತ್ರಾಂಶದ ಮೂಲಕ ಕಡ್ಡಾಯವಾಗಿ ಇ- ಕಾರ್ಡ್ ಪಡೆದಿರಬೇಕು. ಕಾರ್ಮಿಕರು ಮಂಡಳಿಯ ಅಧಿಕೃತ ವೆಬ್ಸೈಟ್ ಗೆ (https://kbocwwb.karnataka.gov.in) ಭೇಟಿ ನೀಡಿ ತಮ್ಮ ನೋಂದಣಿ ಸಂಖ್ಯೆ ಮತ್ತು ಸೇವಾ ಸಿಂಧು ಕಾರ್ಡ್ ನಲ್ಲಿರುವ ಉಲ್ಲೇಖ ಸಂಖ್ಯೆ ನಮೂದಿಸಿ ಇ ಕಾರ್ಡ್ ಅನ್ನು ಡೌನ್ಲೋಡ್ ಮಾಡಿಕೊಳ್ಳಬಹುದು ಎಂದು ಹೇಳಲಾಗಿದೆ.

