HomeLatest Newsಚೆನ್ನಮ್ಮ ಅವರ ಅಂತಿಮ ದರ್ಶನ ಪಡೆದ ಸ್ಯಾಂಡಲ್ ವುಡ್ ನಟ-ನಟಿಯರು

ಚೆನ್ನಮ್ಮ ಅವರ ಅಂತಿಮ ದರ್ಶನ ಪಡೆದ ಸ್ಯಾಂಡಲ್ ವುಡ್ ನಟ-ನಟಿಯರು

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ತೀವ್ರ ಉಸಿರಾಟದ ಸಮಸ್ಯೆ, ಹೃದಯಾಘಾತದಿಂದ ನಿಧನರಾಗಿದ್ದು, ನಾಳೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.

ಚೆನ್ನಮ್ಮ ನಿಧನಕ್ಕೆ ಗಣ್ಯಾತಿಗಣ್ಯರು, ರಾಜಕೀಯ ನಾಯಕರು, ಸಿನಿತಾರೆಯರು ಕಂಬನಿ ಮಿಡಿದಿದ್ದಾರೆ. ಇಂದು ಬೆಳಿಗ್ಗೆ ಬೆಂಗಳೂರಿನ ಪದ್ಮನಾಭನಗರದ ದೇವೇಗೌಡರ ಮನೆಯಲ್ಲಿ ಚೆನ್ನಮ್ಮ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ಗಣ್ಯರು ಹಾಗೂ ಸಿನಿ ತಾರೆಯರು ಆಗಮಿಸಿ ಅಂತಿಮ ದರ್ಶನ ಪಡೆದರು.

ಹಿರಿಯ ನಟ ದೊಡ್ಡಣ್ಣ, ನಟರಾದ ದುನಿಯಾ ವಿಜಯ್, ಡಾಲಿ ಧನಂಜಯ್, ನಿರ್ದೇಶಕ ಎಸ್.ನಾರಾಯಣ್, ನಟಿ ಪೂಜಾ ಗಾಂಧಿ ಮೊದಲಾದವರು ಆಗಮಿಸಿ ಚೆನ್ನಮ್ಮ ಅವರ ಅಂತಿಮ ದರ್ಶನ ಪಡೆದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಟಿ ಪೂಜಾಗಾಂಧಿ ಮಾತನಾಡಿ, ಚನ್ನಮ್ಮ ಅವರ ನಿಧನದಿಂದ ಮನಸ್ಸಿಗೆ ತುಂಬಾ ನೋವಾಗುತ್ತಿದೆ. ದೇವೇಗೌಡರ ಮನೆಗೆ ಬಂದಾಗ ಪ್ರೀತಿಯಿಂದ ಮಾತಾಡಿಸ್ತಾ ಇದ್ದರು. ಊಟ ಮಾಡಲು ಹೇಳ್ತಿದ್ದರು. ಅವರಲ್ಲಿ ಮಾತೃಭಾವ ಇತ್ತು. ದೇವೇಗೌಡರ ಕುಟುಂಬಕ್ಕೆ ಅವರ ಅಗಲಿಕೆ ನೋವು ಭರಿಸುವ ಶಕ್ತಿ ಕೊಡಲಿ ಎಂದು ಪ್ರಾರ್ಥಿಸಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular