ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಸೋಮವಾರದಿಂದ ಆರಂಭವಾಗಲಿದ್ದು, ಆಡಳಿತಾರೂಢ NDA ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವಿನ ವಾಕ್ಸಮರಕ್ಕೆ ಕಲಾಪ ಸಾಕ್ಷಿಯಾಗುವ ಸಾಧ್ಯತೆ ಇದೆ.
ಕೇಂದ್ರ ಸರ್ಕಾರವು ಆದಾಯ ತೆರಿಗೆ ಸುಧಾರಣೆ ಸೇರಿದಂತೆ 7 ಪ್ರಮುಖ ಮಸೂದೆಗಳನ್ನು ಮಂಡಿಸಿ ಒಪ್ಪಿಗೆ ಪಡೆಯಲು ಕಸರತ್ತು ನಡೆಸಿದೆ. ಇಂಡಿಯಾ ಒಕ್ಕೂಟ ನೀಟ್ ಯುಜಿ ಪರೀಕ್ಷಾ ಅಕ್ರಮ, ರಾಮ ಮಂದಿರ ದೇಣಿಗೆ ಅಕ್ರಮ ವಿವಾದಗಳನ್ನು ಇಟ್ಟುಕೊಂಡು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಸಜ್ಜಾಗಿದೆ.
ಇದೇ ಅಧಿವೇಶನದಲ್ಲಿ ಕ್ಷೇತ್ರ ವಿಂಗಡಣೆ, ಮಹಿಳಾ ಮೀಸಲಾತಿ ಮಸೂದೆ ಮರುಮಂಡನೆಯಾಗುವ ಸಾಧ್ಯತೆ ಇದೆ. ಸಂಸತ್ ಕಲಾಪದ ಹಿನ್ನೆಲೆಯಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಭಾನುವಾರ ಸರ್ವ ಪಕ್ಷಗಳ ನಾಯಕರೊಂದಿಗೆ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಸುಗಮ ಕಲಾಪಕ್ಕೆ ಮನವಿ ಮಾಡಿಕೊಂಡಿದ್ದಾರೆ.

