HomeLatest Newsಹೊಸ ಎಲೆಕ್ಟ್ರಿಕ್ ಕಾರು ಖರೀದಿಸಿದ ನಟ ಕಿಚ್ಚ ಸುದೀಪ್ ; ವೀಡಿಯೋ ವೈರಲ್ |WATCH VIDEO

ಹೊಸ ಎಲೆಕ್ಟ್ರಿಕ್ ಕಾರು ಖರೀದಿಸಿದ ನಟ ಕಿಚ್ಚ ಸುದೀಪ್ ; ವೀಡಿಯೋ ವೈರಲ್ |WATCH VIDEO

ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ತಮ್ಮ ಕಾರುಗಳ ಮೇಲಿನ ಪ್ರೀತಿಗೆ ಮತ್ತೊಂದು ಸೇರ್ಪಡೆ ಮಾಡಿದ್ದಾರೆ. ಈ ಬಾರಿ ಅವರು ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನವನ್ನು ಆಯ್ಕೆ ಮಾಡಿಕೊಂಡಿದ್ದು, ಮಹೀಂದ್ರಾ ಕಂಪನಿಯ BE 6 ಎಲೆಕ್ಟ್ರಿಕ್ ಎಸ್‌ಯುವಿಯನ್ನು ಖರೀದಿಸಿದ್ದಾರೆ. ಹೊಸ ಕಾರಿನ ಡೆಲಿವರಿ ವೇಳೆ ನಡೆದ ವಿಶೇಷ ಕ್ಷಣಗಳ ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಹೌದು.  ಸ್ಯಾಂಡಲ್‌ವುಡ್ ನಟ ಕಿಚ್ಚ ಸುದೀಪ್ ತಮ್ಮ ಐಷಾರಾಮಿ ಕಾರುಗಳ ಸಂಗ್ರಹಕ್ಕೆ ಮತ್ತೊಂದು ಹೊಸ ಸೇರ್ಪಡೆ ಮಾಡಿದ್ದಾರೆ. ಈ ಬಾರಿ ಅವರು ಮಹೀಂದ್ರಾ ಕಂಪನಿಯ ಅತ್ಯಾಧುನಿಕ BE 6 ಎಲೆಕ್ಟ್ರಿಕ್ ಎಸ್‌ಯುವಿಯನ್ನು ಖರೀದಿಸಿದ್ದು, ಹೊಸ ಕಾರಿನ ಡೆಲಿವರಿ ವೇಳೆ ಸೆರೆಹಿಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮಹೀಂದ್ರಾ ಶೋರೂಮ್‌ನಲ್ಲಿ ನಡೆದ ಡೆಲಿವರಿ ಕಾರ್ಯಕ್ರಮದಲ್ಲಿ ಕಾರಿನ ಮೇಲಿದ್ದ ಕವರ್ ಅನ್ನು ತೆರವುಗೊಳಿಸಿ ಸುದೀಪ್ ಹೊಸ ಕಾರನ್ನು ಅನಾವರಣಗೊಳಿಸಿದರು. ಈ ವೇಳೆ ಮಹೀಂದ್ರಾ ಸಿಬ್ಬಂದಿ ಹೂಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದ್ದು, ಹೊಸ ಪ್ರಯಾಣಕ್ಕೆ ಶುಭ ಹಾರೈಸಿದರು. ಈ  ದೃಶ್ಯಗಳು ಅಭಿಮಾನಿಗಳ ಗಮನ ಸೆಳೆಯುತ್ತಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಹೀಂದ್ರಾ BE 6 ಆಕರ್ಷಕ ಸ್ಪೋರ್ಟಿ ವಿನ್ಯಾಸ, ಆಧುನಿಕ ತಂತ್ರಜ್ಞಾನ ಹಾಗೂ ಉತ್ತಮ ಡ್ರೈವಿಂಗ್ ರೇಂಜ್ ಹೊಂದಿರುವ ಪ್ರೀಮಿಯಂ ಎಲೆಕ್ಟ್ರಿಕ್ ಎಸ್‌ಯುವಿಯಾಗಿದೆ. ಹಲವು ಬಣ್ಣಗಳಲ್ಲಿ ಲಭ್ಯವಿರುವ ಈ ಕಾರು ಈಗಾಗಲೇ ಭಾರತೀಯ ಮಾರುಕಟ್ಟೆಯಲ್ಲಿ ಗಮನ ಸೆಳೆದಿದೆ.ಇನ್ನು ಸಿನಿಮಾ ವಿಚಾರಕ್ಕೆ ಬಂದರೆ, ಕಿಚ್ಚ ಸುದೀಪ್ ತಮ್ಮ ಬಹುನಿರೀಕ್ಷಿತ ‘ಬಿಲ್ಲ ರಂಗ ಭಾಷ’ ಚಿತ್ರದ ಕೆಲಸದಲ್ಲಿ ನಿರತರಾಗಿದ್ದು, ಮತ್ತೊಂದು ರೊಮ್ಯಾಂಟಿಕ್ ಕಾಮಿಡಿ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ಇದರ ಜೊತೆಗೆ, ಶೀಘ್ರದಲ್ಲೇ ಆರಂಭವಾಗಲಿರುವ ಬಿಗ್ ಬಾಸ್ ಕನ್ನಡ ಹೊಸ ಸೀಸನ್‌ನ ನಿರೂಪಕರಾಗಿಯೂ ಮತ್ತೆ ಕಾಣಿಸಿಕೊಳ್ಳಲಿದ್ದಾರೆ.

ಶೀ‍ಘ್ರವೇ ಬಿಗ್ ಬಾಸ್ ಆರಂಭ

ಕನ್ನಡದ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ-13′ ಶೀಘ್ರದಲ್ಲೇ ಪ್ರಾರಂಭವಾಗಲಿದ್ದು, ಕಾರ್ಯಕ್ರಮದ ಕುರಿತು ಅಭಿಮಾನಿಗಳಲ್ಲಿ ಭಾರೀ ನಿರೀಕ್ಷೆ ಮೂಡಿದೆ. ಈಗಾಗಲೇ ಬಿಡುಗಡೆಯಾದ ಅಧಿಕೃತ ಟೀಸರ್ ಮೂಲಕ ನಟ ಕಿಚ್ಚ ಸುದೀಪ್ ಮತ್ತೊಮ್ಮೆ ಕಾರ್ಯಕ್ರಮದ ನಿರೂಪಕರಾಗಿ ಮರಳುವುದು ಖಚಿತವಾಗಿದೆ.

ಕಳೆದ ಸೀಸನ್ ಬಳಿಕ ಸುದೀಪ್ ಶೋ ಬಿಡಲಿದ್ದಾರೆ ಎಂಬ ಊಹಾಪೋಹಗಳು ಕೇಳಿಬಂದಿದ್ದರೂ, ಇದೀಗ ಅವರು ಮತ್ತೆ ನಿರೂಪಕರಾಗಿ ಕಾಣಿಸಿಕೊಳ್ಳಲಿರುವುದು ಅಭಿಮಾನಿಗಳಿಗೆ ಸಂತಸ ತಂದಿದೆ. ಈ ಬಾರಿ ಹಿಂದಿನ ಸೀಸನ್‌ಗಳಿಗಿಂತ ವಿಭಿನ್ನವಾಗಿ ಹೊಸ ಟ್ವಿಸ್ಟ್‌ಗಳು, ಹೊಸ ಟಾಸ್ಕ್‌ಗಳು ಮತ್ತು ಸಾಮಾನ್ಯ ಜನರಿಗೂ ಅವಕಾಶ ನೀಡುವ ಪರಿಕಲ್ಪನೆ ಇರಬಹುದು ಎಂಬ ಸುಳಿವು ಟೀಸರ್‌ನಲ್ಲಿ ನೀಡಲಾಗಿದೆ.

ಸದ್ಯಕ್ಕೆ ಸ್ಪರ್ಧಿಗಳ ಅಧಿಕೃತ ಪಟ್ಟಿ, ಆರಂಭದ ದಿನಾಂಕ ಹಾಗೂ ಇತರ ವಿವರಗಳನ್ನು ವಾಹಿನಿ ಬಹಿರಂಗಪಡಿಸಿಲ್ಲ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಹಲವು ಹೆಸರುಗಳು ಹರಿದಾಡುತ್ತಿದ್ದು, ಶೀಘ್ರದಲ್ಲೇ ಅಧಿಕೃತ ಘೋಷಣೆ ನಿರೀಕ್ಷಿಸಲಾಗಿದೆ. ಇದೇ ವೇಳೆ, ದಕ್ಷಿಣ ಭಾರತದ ಕನ್ನಡ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳ ಬಿಗ್ ಬಾಸ್ ಹೊಸ ಸೀಸನ್‌ಗಳು ಒಂದೇ ದಿನದಂದು ಆರಂಭವಾಗುವ ಸಾಧ್ಯತೆ ಇದೆ ಎಂಬ ವರದಿಗಳೂ ಪ್ರಕಟವಾಗಿವೆ.

View this post on Instagram

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular