HomeKarnatakaBREAKING: ಚಲಿಸುತ್ತಿದ್ದ ಬಸ್ ನಲ್ಲಿಯೇ ಹೃದಯಾಘಾತ: ಶಿಕ್ಷಕ ದುರ್ಮರಣ

BREAKING: ಚಲಿಸುತ್ತಿದ್ದ ಬಸ್ ನಲ್ಲಿಯೇ ಹೃದಯಾಘಾತ: ಶಿಕ್ಷಕ ದುರ್ಮರಣ

ಧಾರವಾಡ: ಇತ್ತೀಚಿನ ದಿನಗಳಲ್ಲಿ ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ಮತ್ತೆ ಹೆಚ್ಚುತ್ತಿದೆ. ಚಲಿಸುತ್ತಿದ್ದ ಬಸ್ ನಲ್ಲಿಯೇ ಪ್ರಯಾಣಿಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ.

ಕಲಬುರಗಿಯಿಂದ ಧಾರವಾಡಕ್ಕೆ ಪ್ರಯಾಣಿಸುತ್ತಿದ್ದ ಸಾರಿಗೆ ಬಸ್‌ನಲ್ಲಿ ಪ್ರಯಾಣಿಕರೊಬ್ಬರಿಗೆ ಹಠಾತ್ ಹೃದಯಾಘಾತ ಸಂಭವಿಸಿದೆ. ಬಸ್ ನಲ್ಲಿಯೇ ವ್ಯಕ್ತಿ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಷ್ಟ್ರ‍ರಲ್ಲೇ ಕೊನೆಯುಸಿರೆಳೆದಿದ್ದಾರೆ.

ಮೃತರನ್ನು ಧಾರವಾಡ ಮೂಲದ ಶಿಕ್ಷಕ ಸತೀಶ್ ಮರಬ್ಬ ಎಂದು ಗುರುತಿಸಲಾಗಿದೆ. ಬಸ್ ನಲ್ಲಿ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದ ಅವರನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular