HomeAgricultureರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಹಿನ್ನೆಲೆ ಪ್ರತಿ ರೈತರಿಗೆ ಸರ್ಕಾರದಿಂದ 50 ಸಾವಿರ ರೂ. ಪರಿಹಾರ...

ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಹಿನ್ನೆಲೆ ಪ್ರತಿ ರೈತರಿಗೆ ಸರ್ಕಾರದಿಂದ 50 ಸಾವಿರ ರೂ. ಪರಿಹಾರ ನೀಡಲು ಯಡಿಯೂರಪ್ಪ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಬರಗಾಲ ಪರಿಸ್ಥಿತಿ ತೀವ್ರವಾಗಿದ್ದು, ರಾಜ್ಯ ಸರ್ಕಾರ ಇನ್ನೂ ಎಚ್ಚೆತ್ತುಕೊಂಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬರ ಪರಿಸ್ಥಿತಿಯಿಂದಾಗಿ ರೈತರು ಸಂಕಷ್ಟದಲ್ಲಿದ್ದಾರೆ. ಕೃಷಿಗೆ ನೀರು ಇಲ್ಲ, ಜಾನುವಾರುಗಳಿಗೆ ಮೇವು ಇಲ್ಲ. ರೈತರ ಸಂಕಷ್ಟ ನಿವಾರಿಸಲು ರಾಜ್ಯ ಸರ್ಕಾರ ಪರಿಹಾರ ಘೋಷಿಸಬೇಕು. ಪ್ರತಿ ರೈತರಿಗೆ 50,000 ರೂ. ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಬರಗಾಲ ತೀವ್ರಗೊಂಡಿದ್ದು, ರಾಜ್ಯ ಸರ್ಕಾರ ಕೂಡಲೇ ರೈತರ ನೆರವಿಗೆ ಧಾವಿಸಬೇಕು. ರಾಜ್ಯದ ಜಲಾಶಯ, ಅಣೆಕಟ್ಟುಗಳಲ್ಲಿ ನೀರಿಲ್ಲ, ಬಿತ್ತಿದ ಬಿತ್ತನೆ ಬೀಜ ಮೊಳಕಯೊಡೆದು ಹಾಳಾಗಿದೆ. ಶೇಕಡ 10ರಷ್ಟು ಫಸಲು ಕೂಡ ಬರದಂತಹ ಪರಿಸ್ಥಿತಿ ಇದೆ. ಇಷ್ಟು ತೀವ್ರ ಬರಗಾಲವಿದ್ದರೂ ಸರ್ಕಾರ ಮೌನವಾಗಿದೆ. ಇದುವರೆಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸರ್ಕಾರ ಪ್ರತಿ ರೈತರಿಗೆ ಕನಿಷ್ಠ 50 ಸಾವಿರ ರೂ. ಪರಿಹಾರ ನೀಡಿ ಅವರ ನೆರವಿಗೆ ಬಂದರೆ ಅವರಿಗೆ ಅನುಕೂಲವಾಗಲಿದ್ದು, ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular