HomeKarnatakaBIG NEWS: ‘ಗೃಹಲಕ್ಷ್ಮಿ’ ಯೋಜನೆ ಫಲಾನುಭವಿಗಳ ಮರು ನವೀಕರಣ ಮಾರ್ಗಸೂಚಿಗೆ ಇನ್ನೂ ಸಿಗದ ಸಚಿವ ಸಂಪುಟ...

BIG NEWS: ‘ಗೃಹಲಕ್ಷ್ಮಿ’ ಯೋಜನೆ ಫಲಾನುಭವಿಗಳ ಮರು ನವೀಕರಣ ಮಾರ್ಗಸೂಚಿಗೆ ಇನ್ನೂ ಸಿಗದ ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಮರು ನವೀಕರಣ ಮಾರ್ಗಸೂಚಿಗೆ ಸಚಿವ ಸಂಪುಟದ ಒಪ್ಪಿಗೆ ಇನ್ನೂ ಸಿಕ್ಕಿಲ್ಲ.

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಂದ ಮರು ನವೀಕರಣ ಸಂಭಂದಿಸಿದಂತೆ ಮಾರ್ಗಸೂಚಿ ಸಿದ್ದಪಡಿಸಿ ಸರ್ಕಾರಕ್ಕೆ ಕಳುಹಿಸಲಾಗಿದೆ. ಸಚಿವ ಸಂಪುಟದಲ್ಲಿ ಒಪ್ಪಿಗೆ ಸಿಕ್ಕ ನಂತರ ಬಯೋಮೆಟ್ರಿಕ್ ಪಡೆಯುವುದು ಅಥವಾ ಇತರೆ ಕಾರ್ಯಾಚರಣೆ ನಡೆಯಲಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಾಹಿತಿ ನೀಡಿದೆ.

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಮೇ ತಿಂಗಳವರೆಗಿನ ಹಣ ಬಿಡುಗಡೆ ಮಾಡಲಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ ತೆರಿಗೆ ಪಾವತಿದಾರರು, ನಿಧನರಾದವರ ಖಾತೆಗಳಿಗೂ ಹಣ ಜಮಾ ಆಗುತ್ತಿತ್ತು. ಅನರ್ಹರನ್ನು ಗೃಹಲಕ್ಷ್ಮಿ ಯೋಜನೆಯಿಂದ ಕೈ ಬಿಡುವ ಉದ್ದೇಶದಿಂದ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಮರು ನವೀಕರಣಕ್ಕೆ ಮುಂದಾಗಿದ್ದು, ಅವರು ಅರ್ಜಿ ಸಲ್ಲಿಸಬೇಕಿದೆ. ಆದರೆ ಈ ಸಂಬಂಧ ಇನ್ನು ಯಾವುದೇ ಅಧಿಸೂಚನೆ ಹೊರಡಿಸಿಲ್ಲ. ಸಚಿವ ಸಂಪುಟದಲ್ಲಿ ಒಪ್ಪಿಗೆ ಸಿಕ್ಕ ನಂತರ ಬಯೋಮೆಟ್ರಿಕ್, ಮರು ನವೀಕರಣ ಪ್ರಕ್ರಿಯೆ ನಡೆಯಲಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸರ್ಕಾರದಿಂದ ಗೃಹ ಲಕ್ಷ್ಮಿ ಫಲಾನುಭವಿಗಳಿಗೆ 31ನೇ ಕಂತಿನ ಹಣ ಬಿಡುಗಡೆ

ಸರ್ಕಾರದಿಂದ ಕೊಪ್ಪಳ ಜಿಲ್ಲೆಯಲ್ಲಿನ ಒಟ್ಟು 3,13,183 ಗೃಹ ಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಒಟ್ಟು 62,63,66,000 ರೂ ಬಿಡುಗಡೆಯಾಗಿದ್ದು, ಇನ್ನೆರಡು ದಿನಗಳಲ್ಲಿ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗಲಿದೆ ಎಂದು ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ ಅವರು ತಿಳಿಸಿದ್ದಾರೆ.

ಆಧಾರ್ ಸೀಡೀಂಗ್, ಅಕೌಂಟ್ ಮ್ಯಾಚ್ ಆಗದಿರುವ 1031 ಫಲಾನುಭವಿಗಳ‌ ಮನೆಮನೆಗೆ ಭೇಟಿ ನೀಡಿ, ದಾಖಲಾತಿ ಪರಿಶೀಲಿಸಿ ಅವರಿಗು ಸಹ ಗೃಹಲಕ್ಷ್ಮಿ ಯೋಜನೆಯ ನೆರವು ದೊರಕಲು ಕ್ರಮ ವಹಿಸುವಂತೆ ಆಯಾ ತಾಲೂಕಿನ ಸಿಡಿಪಿಓಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ಯೋಜನೆ ಆರಂಭವಾದ ದಿನದಿಂದ ಇಲ್ಲಿವರೆಗೆ ಒಟ್ಟು 1926 ಕೋಟಿ ರೂ.ಗಳ ನೆರವನ್ನು ಈ ಯೋಜನೆಯ ಫಲಾನುಭವಿಗಳಿಗೆ ಒದಗಿಸಲಾಗಿದೆ. 32ನೇ ಕಂತಿನ ಹಣವು ಕೂಡ ಇನ್ನು ಕೆಲವೇ ದಿನಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಗೃಹಲಕ್ಷ್ಮಿ ಯೋಜನೆಯ ದಾಖಲಾತಿಗಳ ಪರಿಶೀಲನೆಯಿಂದ ಯಾವುದೇ ಫಲಾನುಭವಿಗಳಿಗೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular