HomeKarnatakaSHOCKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ; ಅಪ್ರಾಪ್ತ ಬಾಲಕಿಗೆ ಮದ್ಯ ಕುಡಿಸಿ ರಾತ್ರಿಯಿಡೀ...

SHOCKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ; ಅಪ್ರಾಪ್ತ ಬಾಲಕಿಗೆ ಮದ್ಯ ಕುಡಿಸಿ ರಾತ್ರಿಯಿಡೀ ಗ್ಯಾಂಗ್ ರೇಪ್.!

ಬೆಂಗಳೂರು :   ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದಿರುವ ಎನ್ನಲಾದ ಸಾಮೂಹಿಕ ಅತ್ಯಾಚಾರದ ಪ್ರಕರಣ ಬೆಳಕಿಗೆ ಬಂದಿದ್ದು, ರಾಜ್ಯದಲ್ಲಿ ಮತ್ತೆ ಆಕ್ರೋಶಕ್ಕೆ ಕಾರಣವಾಗಿದೆ.

ದೇವಸ್ಥಾನಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಆಟೋದಲ್ಲಿ ಕರೆದೊಯ್ದ ಆರೋಪಿಗಳು, ಬಲವಂತವಾಗಿ ಮದ್ಯ ಕುಡಿಸಿ ಇಡೀ ರಾತ್ರಿ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ. ಪ್ರಕರಣ ಸಂಬಂಧ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದಿರುವ ಎನ್ನಲಾದ ಸಾಮೂಹಿಕ ಅತ್ಯಾಚಾರದ ಪ್ರಕರಣ ಸಂಚಲನ ಸೃಷ್ಟಿಸಿದೆ.ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ನವೀನ್, ವೆಂಕಟರಮಣ ಹಾಗೂ ರೇಣುಕಾ ಎಂಬ ಆರೋಪಿಗಳು ಬಾಲಕಿಯನ್ನು ದೇವಸ್ಥಾನಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಆಟೋದಲ್ಲಿ ಕರೆದೊಯ್ದಿದ್ದಾರೆ. ಬಳಿಕ ಆಕೆಗೆ ಬಲವಂತವಾಗಿ ಮದ್ಯ ಕುಡಿಸಿ, ಇಡೀ ರಾತ್ರಿ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನೆಯ ಬಳಿಕ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ದೇವನಹಳ್ಳಿ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) ಹಾಗೂ ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳಿಂದ ರಕ್ಷಣೆ (POCSO) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಘಟನೆಯ ನಿಖರ ಕಾರಣ, ಆರೋಪಿಗಳ ಹಿನ್ನೆಲೆ ಹಾಗೂ ಘಟನೆಯ ಸಂಪೂರ್ಣ ವಿವರಗಳನ್ನು ಪೊಲೀಸರು ತನಿಖೆ ಮೂಲಕ ಪತ್ತೆಹಚ್ಚುತ್ತಿದ್ದಾರೆ.ಈ ಅಮಾನವೀಯ ಘಟನೆ ರಾಜ್ಯದಲ್ಲಿ ಮಹಿಳೆಯರು ಹಾಗೂ ಮಕ್ಕಳ ಸುರಕ್ಷತೆ ಕುರಿತಂತೆ ಮತ್ತೆ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದ್ದು, ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular