HomeKarnatakaಶಾಲಾ ಪ್ರವೇಶಕ್ಕೆ ಲಂಚ ಸ್ವೀಕರಿಸುತ್ತಿದ್ದ ವಸತಿ ಶಾಲೆ ಪ್ರಾಂಶುಪಾಲ ಲೋಕಾಯುಕ್ತ ಬಲೆಗೆ

ಶಾಲಾ ಪ್ರವೇಶಕ್ಕೆ ಲಂಚ ಸ್ವೀಕರಿಸುತ್ತಿದ್ದ ವಸತಿ ಶಾಲೆ ಪ್ರಾಂಶುಪಾಲ ಲೋಕಾಯುಕ್ತ ಬಲೆಗೆ

ಶಿವಮೊಗ್ಗ : ಶಾಲಾ ಪ್ರವೇಶಾತಿ ನೀಡಲು ಬಾಲಕಿಯ ತಂದೆಯಿಂದ ಲಂಚ ಪಡೆಯುತ್ತಿದ್ದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ಪ್ರಾಂಶುಪಾಲರೊಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಸೋಮವಾರ ಭದ್ರಾವತಿ ತಾಲೂಕಿನಲ್ಲಿ ನಡೆದಿದೆ.

ಭದ್ರಾವತಿ ತಾಲೂಕಿನ ತಿಪ್ಲಾಪುರ ಕ್ಯಾಂಪ್ ನಿವಾಸಿ, ಎಳನೀರು ವ್ಯಾಪಾರಿ ಮೇಘರಾಜ.ಸಿ ಎಂಬುವವರು ತಮ್ಮ ಮಗಳು ಕು.ದೀಕ್ಷಾಳನ್ನು ಭದ್ರಾವತಿ ತಾಲೂಕು ಹುಣಸೆಕಟ್ಟೆ ಗ್ರಾಮದಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಗೆ 7ನೇ ತರಗತಿಗೆ ಸೇರಿಸಲು ಬಯಸಿದ್ದರು. ಈ ವೇಳೆ ಶಾಲೆಯ ಪ್ರಾಂಶುಪಾಲರಾದ ನಾಮದೇವ್ ಅವರು ‘ಡ್ರಮ್ ಸೆಟ್’ ಕೊಡುವ ನೆಪದಲ್ಲಿ ರೂ.20,000/- ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು.

ಲಂಚ ನೀಡಲು ಇಷ್ಟವಿಲ್ಲದ ಮೇಘರಾಜ್ ಅವರು ಜುಲೈ 18 ರಂದು ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರು. ಈ ದೂರಿನನ್ವಯ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ-1988 (ತಿದ್ದುಪಡಿ ಕಾಯಿದೆ-2018) ಕಲಂ 7(a) ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೂರುದಾರರು ಮುಂಗಡವಾಗಿ ರೂ‌10,000/- ಹಣವನ್ನು ನೀಡುವುದಾಗಿ ಒಪ್ಪಿಕೊಂಡಿದ್ದರು. ಅದರಂತೆ ಜುಲೈ 20 ರಂದು ಮಧ್ಯಾಹ್ನ 12.20 ಗಂಟೆಗೆ ಹುಣಸೆಕಟ್ಟೆಯ ವಸತಿ ಶಾಲೆಯ ತಮ್ಮ ಕೊಠಡಿಯಲ್ಲಿ ಪ್ರಾಂಶುಪಾಲ ನಾಮದೇವ್ ಅವರು ದೂರುದಾರರಿಂದ ರೂ.10,000/- ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಆಗಿ ವಶಕ್ಕೆ ಪಡೆದಿದ್ದಾರೆ.

ಪೊಲೀಸರು ಲಂಚದ ಹಣವನ್ನು ಜಪ್ತಿ ಮಾಡಿಕೊಂಡಿದ್ದು, ಆಪಾದಿತ ಅಧಿಕಾರಿಯನ್ನು ಮುಂದಿನ ತನಿಖೆಗಾಗಿ ವಶಕ್ಕೆ ಪಡೆದಿದ್ದಾರೆ. ಪ್ರಸ್ತುತ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ರುದ್ರೇಶ್.ಕೆ.ಪಿ. ಅವರು ಪ್ರಕರಣದ ತನಿಖೆ ಕೈಗೊಂಡಿದ್ದಾರೆ ಎಂದು ಕರ್ನಾಟಕ ಲೋಕಾಯುಕ್ತ ಶಿವಮೊಗ್ಗ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.

ಜುಲೈ. 23 ರಂದು ಉದ್ಯೋಗ ನೇರ ಸಂದರ್ಶನ

ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ಜು.23 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ.

ಈ ಸಂದರ್ಶನದಲ್ಲಿ ಡೆಲಿವರಿ ಅಭಯಂ ಪ್ರೈ.ಲಿ. ಭಾಗವಹಿಸಲಿದ್ದು, ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಮತ್ತು ಯಾವುದೇ ಪದವಿ ಪೂರೈಸಿದ, 18 ರಿಂದ 30 ವರ್ಷದೊಳಗಿನ ಪುರುಷ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ಸಂದರ್ಶನಕ್ಕೆ ಬರುವವರು ತಮ್ಮ ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಹಾಜರಾಗಬೇಕು . ನೇರ ಸಂದರ್ಶನಕ್ಕೆ ಪ್ರವೇಶ ಉಚಿತವಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9380663606/ 9108235132 ಗಳನ್ನು ಸಂಪರ್ಕಿಸಬಹುದೆಂದು ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular