ವಿಜಯಪುರ: ಟ್ರ್ಯಾಕ್ಟರ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಂದೆ ಹಾಗೂ ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘೋರ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.
ಟ್ರ್ಯಾಕ್ಟರ್ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಟ್ರ್ಯಾಕ್ಟರ್ನಲ್ಲಿದ್ದ ತಂದೆ-ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾವೆ.ಜಿಲ್ಲೆಯ ನಿಡಗುಂದಿ ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಮುದ್ದೇಬಿಹಾಳ ಕ್ರಾಸ್ ಬಳಿ ನಡೆದಿದೆ.
ಟ್ರ್ಯಾಕ್ಟರ್ನಲ್ಲಿ ಕಾರ್ಮಿಕರು ಕಬ್ಬು ಕಟಾವಿಗೆಂದು ಇಂಡಿಯಿಂದ ಮಂಡ್ಯಕ್ಕೆ ತೆರಳುತ್ತಿದ್ದರು. ಸ್ಪೀಡ್ ಬ್ರೇಕರ್ ಇದ್ದ ಹಿನ್ನೆಲೆ ಚಾಲಕ ಟ್ರ್ಯಾಕ್ಟರ್ ನಿಧಾನವಾಗಿ ಚಲಾಯಿಸಿದ್ದಾನೆ. ಈ ವೇಳೆ ಹಿಂಬದಿಯಿಂದ ವೇಗವಾಗಿ ಬಂದ ಲಾರಿ ಟ್ರ್ಯಾಕ್ಟರ್ಗೆ ಗುದ್ದಿದೆ. ಲಾರಿ ಗುದ್ದಿದ ಪರಿಣಾಮ ಟ್ರ್ಯಾಕ್ಟರ್ನಲ್ಲಿದ್ದ ತಂದೆ-ಮಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

