HomeKarnatakaBIG NEWS : ಸಿಎಂ ಡಿ.ಕೆ. ಶಿವಕುಮಾರ್ ಸಂಪುಟಕ್ಕೆ ಹೊಸ ಸಚಿವರ ಪಟ್ಟಿ ವೈರಲ್‌; ಯಾರಿಗೆ...

BIG NEWS : ಸಿಎಂ ಡಿ.ಕೆ. ಶಿವಕುಮಾರ್ ಸಂಪುಟಕ್ಕೆ ಹೊಸ ಸಚಿವರ ಪಟ್ಟಿ ವೈರಲ್‌; ಯಾರಿಗೆ ಒಲಿಯಲಿದೆ ಮಂತ್ರಿ ಸ್ಥಾನ?

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕ ಸರ್ಕಾರದಲ್ಲಿ ಸಂಪುಟ ವಿಸ್ತರಣೆ ಕುರಿತ ಚರ್ಚೆಗಳು ಮತ್ತೆ ಜೋರಾಗಿವೆ. ಈ ನಡುವೆ ಹೊಸ ಸಚಿವರ ಪಟ್ಟಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ವೈರಲ್ ಆಗಿರುವ ಪಟ್ಟಿಯಲ್ಲಿ ಕೆಲವು ಶಾಸಕರ ಹೆಸರುಗಳನ್ನು ಸಚಿವ ಸ್ಥಾನಕ್ಕೆ ಪರಿಗಣಿಸಲಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಈ ಪಟ್ಟಿಗೆ ಅಧಿಕೃತವಾಗಿ ಕಾಂಗ್ರೆಸ್ ಹೈಕಮಾಂಡ್ ಅಥವಾ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಂದ ಯಾವುದೇ ದೃಢೀಕರಣ ಲಭಿಸಿಲ್ಲ.ಸಂಪುಟ ವಿಸ್ತರಣೆ ಸಂಬಂಧ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿ ಭೇಟಿ ನೀಡಿದ್ದು, ಕಾಂಗ್ರೆಸ್ ವರಿಷ್ಠರೊಂದಿಗೆ ಚರ್ಚೆಗಳು ನಡೆದಿವೆ ಎನ್ನಲಾಗಿದೆ. ಪ್ರಾದೇಶಿಕ, ಜಾತಿ ಹಾಗೂ ರಾಜಕೀಯ ಸಮೀಕರಣಗಳನ್ನು ಗಮನದಲ್ಲಿಟ್ಟುಕೊಂಡು ಸಚಿವರ ಆಯ್ಕೆ ನಡೆಯಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಅನೇಕಲ್ ಕ್ಷೇತ್ರದ ಶಾಸಕ ಬಿ.ಶಿವಣ್ಣ, ಅಥಣಿ ಕ್ಷೇತ್ರದ ಶಾಸಕ ಲಕ್ಷ್ಮಣ್ ಸವದಿ, ಚಳ್ಳಕೆರೆ ಕ್ಷೇತ್ರದ ಶಾಸಕ ಟಿ ರಘುಮೂರ್ತಿ, ಹುಬ್ಬಳ್ಳಿ ಧಾರವಾಡ ಪೂರ್ವ ಕ್ಷೇತ್ರದ ಶಾಸಕ ಅಬ್ಬಯ್ಯ ಪ್ರಸಾದ್, ಕಡೂರು ಶಾಸಕ ಕೆಎಸ್ ಆನಂದ್, ಮೂಡಿಗೆರೆ ಶಾಸಕಿ ನಯನಾ ಮೋಟಮ್ಮಗೆ ಸಚಿವ ಸ್ಥಾನ ಫಿಕ್ಸ್ ಎಂದು ಹೇಳಲಾಗುತ್ತಿದೆ.ಸಚಿವರ ಸ್ಥಾನದಲ್ಲಿ ರಿಜ್ವಾದ್ ಅರ್ಷದ್, ಜಮೀರ್ ಅಹಮದ್ ಖಾನ್, ತನ್ವೀರ್ ಸೇಠ್,. ಕನಿಜ್ ಫಾತಿಮಾ, ಸಲೀಂ ಅಹಮದ್ ಹೆಸರು ಕೇಳಿಬರುತ್ತಿದೆ. ಅದೇ ರೀತಿ ಅಶೋಕ ಪಟ್ಟಣ, ಲಕ್ಷ್ಮಣ ಸವದಿ, ವಿಜಯಾನಂದ ಕಾಶಪ್ಪನವರ, ಬಸವರಾಜ ರಾಯರೆಡ್ಡಿ, ಹಂಪನಗೌಡ ಬಾದರ್ಲಿ ಮತ್ತಿತರರು ರೇಸ್ ನಲ್ಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೆಹಲಿಗೆ CM ಡಿ.ಕೆ. ಶಿವಕುಮಾರ್

ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿಗೆ ತೆರಳಿದ್ದು, ಕಾಂಗ್ರೆಸ್‌ನ ಹಿರಿಯ ನಾಯಕರೊಂದಿಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಮುಂಬರುವ ವಿಧಾನಸಭಾ ಅಧಿವೇಶನಕ್ಕೂ ಮುನ್ನ ಸಚಿವ ಸಂಪುಟ ವಿಸ್ತರಣೆ ಮಾಡುವ ಉದ್ದೇಶವಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಮೂಲಗಳ ಪ್ರಕಾರ, ಈ ಬಾರಿ ಸುಮಾರು ಐವರು ಶಾಸಕರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಪ್ರಾದೇಶಿಕ, ಜಾತಿ ಹಾಗೂ ರಾಜಕೀಯ ಸಮತೋಲನವನ್ನು ಗಮನದಲ್ಲಿಟ್ಟುಕೊಂಡು ಹೊಸ ಸಚಿವರ ಆಯ್ಕೆ ನಡೆಯಲಿದೆ ಎಂದು ಹೇಳಲಾಗಿದೆ. ಹಿರಿಯ ನಾಯಕರಿಗೆ ಅವಕಾಶ ನೀಡುವುದು, ಕೆಲ ಸಚಿವರ ಖಾತೆ ಬದಲಾವಣೆ ಹಾಗೂ ಹೊಸ ಮುಖಗಳಿಗೆ ಅವಕಾಶ ಕಲ್ಪಿಸುವ ವಿಚಾರಗಳ ಬಗ್ಗೆಯೂ ಕಾಂಗ್ರೆಸ್ ನಾಯಕತ್ವ ಚರ್ಚೆ ನಡೆಸುತ್ತಿದೆ ಎನ್ನಲಾಗಿದೆ. ಆದರೆ ಸಚಿವರ ಅಂತಿಮ ಪಟ್ಟಿ ಇನ್ನೂ ಅಧಿಕೃತವಾಗಿ ಬಿಡುಗಡೆಯಾಗಿಲ್ಲ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular