ನವದೆಹಲಿ: ನೀಟ್-ಯುಜಿ (NEET-UG) 2026 ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ವಿರುದ್ಧ ದೆಹಲಿಯಲ್ಲಿ ನಡೆದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಕ್ರಮವನ್ನು ಖಂಡಿಸಿರುವ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿದ್ಯಾರ್ಥಿಗಳ ಆತಂಕದ ಬಗ್ಗೆ ಸರ್ಕಾರ ಮೌನ ವಹಿಸಿದೆ ಎಂದು ಆರೋಪಿಸಿದ ಅವರು, ಪ್ರಧಾನಿ ಮೋದಿ ವಿದ್ಯಾರ್ಥಿಗಳ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.
ದೇಶದ ಶಿಕ್ಷಣ ಮತ್ತು ಪರೀಕ್ಷಾ ವ್ಯವಸ್ಥೆಯಲ್ಲಿ ಆಳವಾದ ಸಮಸ್ಯೆಗಳಿವೆ ಎಂದು ಹೇಳಿದ ರಾಹುಲ್ ಗಾಂಧಿ, “ನಿನ್ನೆ ನಡೆದ ಘಟನೆಯ ಬಗ್ಗೆ ಮೋದಿ ಅವರು ಇನ್ನೂ ಕ್ಷಮೆಯಾಚಿಸಿಲ್ಲ. ದೇಶದ ಯುವಕರು ಶಿಕ್ಷಣ ಮತ್ತು ಪರೀಕ್ಷಾ ವ್ಯವಸ್ಥೆಯ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವ್ಯವಸ್ಥೆಯನ್ನು ಸಂಪೂರ್ಣವಾಗಿ ಹಾಳು ಮಾಡಲಾಗಿದೆ ಎಂಬುದು ದೇಶಕ್ಕೇ ಗೊತ್ತಿದೆ. ಹಾಗಿದ್ದರೂ ಪ್ರಧಾನಿ ಏಕೆ ಮೌನವಾಗಿದ್ದಾರೆ? ವಿದ್ಯಾರ್ಥಿಗಳ ಕ್ಷಮೆ ಕೇಳಿ, ಅವರ ಮೇಲೆ ಲಾಠಿ ಬೀಸುವಂತಹ ಕೃತ್ಯವನ್ನು ನಿಲ್ಲಿಸಬೇಕು” ಎಂದು ಹೇಳಿದ್ದಾರೆ.
ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, NEET-UG 2026 ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ನಡೆಸಿದ ಕ್ರಮವನ್ನು ಖಂಡಿಸಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿದ್ಯಾರ್ಥಿಗಳ ಆತಂಕದ ಬಗ್ಗೆ ಸರ್ಕಾರ ಮೌನ ವಹಿಸಿದೆ ಎಂದು ಆರೋಪಿಸಿದ ಅವರು, ಪ್ರಧಾನಿ ವಿದ್ಯಾರ್ಥಿಗಳ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.
ದೇಶದ ಶಿಕ್ಷಣ ಮತ್ತು ಪರೀಕ್ಷಾ ವ್ಯವಸ್ಥೆಯಲ್ಲಿ ಆಳವಾಗಿ ಬೇರುಬಿಟ್ಟಿರುವ ಸಮಸ್ಯೆಗಳ ಬಗ್ಗೆ ಪ್ರಧಾನಿ ಮೌನವಾಗಿರುವುದನ್ನು ಪ್ರಶ್ನಿಸಿದ ರಾಹುಲ್ ಗಾಂಧಿ,”ನಿನ್ನೆ ನಡೆದ ಘಟನೆಗೆ ಮೋದಿ ಜಿ ಇನ್ನೂ ಕ್ಷಮೆಯಾಚಿಸಿಲ್ಲ. ದೇಶದ ಯುವಕರು ಶಿಕ್ಷಣ ಮತ್ತು ಪರೀಕ್ಷಾ ವ್ಯವಸ್ಥೆಯ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಶಿಕ್ಷಣ ಮತ್ತು ಪರೀಕ್ಷಾ ವ್ಯವಸ್ಥೆಯನ್ನು ಒಳಗಿನಿಂದಲೇ ಸಂಪೂರ್ಣವಾಗಿ ಹಾಳು ಮಾಡಲಾಗಿದೆ ಎಂಬುದು ಇಡೀ ದೇಶಕ್ಕೆ ಗೊತ್ತಿದೆ. ಹಾಗಿದ್ದರೂ ಪ್ರಧಾನಿ ಏಕೆ ಮೌನವಾಗಿದ್ದಾರೆ? ಅವರು ವಿದ್ಯಾರ್ಥಿಗಳ ಕ್ಷಮೆ ಕೇಳಬೇಕು ಮತ್ತು ವಿದ್ಯಾರ್ಥಿಗಳ ಮೇಲೆ ಲಾಠಿ ಬೀಸುವಂತಹ ಈ ಅನಗತ್ಯ ಕ್ರಮವನ್ನು ಕೂಡಲೇ ನಿಲ್ಲಿಸಬೇಕು,” ಎಂದು ಹೇಳಿದ್ದಾರೆ.
ಈ ಹೇಳಿಕೆ, ಕಾಕ್ರೋಚ್ ಜನತಾ ಪಾರ್ಟಿ (CJP) ನೇತೃತ್ವದಲ್ಲಿ ನಡೆದ ‘ಸಂಸದ್ ಚಲೋ’ ಪ್ರತಿಭಟನೆಯ ಒಂದು ದಿನದ ಬಳಿಕ ಬಂದಿದೆ. ಪ್ರತಿಭಟನಾಕಾರರು ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಹೊಣೆಗಾರಿಕೆಯನ್ನು ನಿಗದಿಪಡಿಸಬೇಕು ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಸಂಸತ್ ಕಡೆಗೆ ಮೆರವಣಿಗೆ ನಡೆಸಿದ್ದರು.
ಆದರೆ ಸಂಸತ್ ಸಮೀಪ ಭದ್ರತಾ ತಡೆಗೋಡೆಗಳನ್ನು ದಾಟಲು ಪ್ರತಿಭಟನಾಕಾರರು ಯತ್ನಿಸಿದಾಗ, ದೆಹಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಘರ್ಷಣೆ ಉಂಟಾಯಿತು. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮತ್ತು ಅಶ್ರುವಾಯು ಬಳಸಿದ್ದು, ಎರಡೂ ಕಡೆಯವರಿಗೂ ಗಾಯಗಳಾಗಿವೆ.ದೆಹಲಿ ಪೊಲೀಸರ ಪ್ರಕಾರ, ಈ ಘರ್ಷಣೆಯಲ್ಲಿ ಹಿರಿಯ ಅಧಿಕಾರಿಗಳನ್ನು ಒಳಗೊಂಡಂತೆ 118ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದು, ಸುಮಾರು 60 ಪ್ರತಿಭಟನಾಕಾರರೂ ಗಾಯಗೊಂಡಿದ್ದಾರೆ. ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದು, ತಡೆಗೋಡೆಗಳನ್ನು ಒಡೆಯಲು ಯತ್ನಿಸಿದ್ದು ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ.
ಇದೇ ವೇಳೆ, ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರು ಮಂಗಳವಾರ ರಾಮ ಮನೋಹರ್ ಲೋಹಿಯಾ (RML) ಆಸ್ಪತ್ರೆಗೆ ಭೇಟಿ ನೀಡಿ ಗಾಯಗೊಂಡ ಪ್ರತಿಭಟನಾಕಾರರ ಆರೋಗ್ಯ ವಿಚಾರಿಸಿದರು.ಜೆ.ಪಿ. ನಡ್ಡಾ ಅವರು CJP ಪ್ರತಿನಿಧಿಗಳಾದ ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಹಾಗೂ ಮುಖ್ಯ ವಕ್ತಾರ ಸೌರವ್ ದಾಸ್ ಅವರೊಂದಿಗೆ ಸಭೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರು ತಮ್ಮ ಪ್ರಮುಖ ಬೇಡಿಕೆಗಳನ್ನು ಪುನರುಚ್ಚರಿಸಿದರು. ಅವುಗಳಲ್ಲಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ನೀಟ್ ವಿವಾದದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ವಿದ್ಯಾರ್ಥಿಗಳ ಕುಟುಂಬಗಳಿಗೆ ತಲಾ ₹1 ಕೋಟಿ ಪರಿಹಾರ, ಹಾಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋನಂ ವಾಂಗ್ಚುಕ್ ಅವರನ್ನು ಬಿಡುಗಡೆ ಮಾಡಬೇಕು ಎಂಬ ಬೇಡಿಕೆಗಳು ಸೇರಿವೆ.

