HomeKarnatakaBREAKING : ಬೆಂಗಳೂರಲ್ಲಿ ಫುಟ್ಪಾತ್ ತೆರವು ವೇಳೆ GBA ಅಧಿಕಾರಿಗಳ ಮೇಲೆ ಮಾರಣಾಂತಿಕ ಹಲ್ಲೆ; ಮಹಿಳಾ...

BREAKING : ಬೆಂಗಳೂರಲ್ಲಿ ಫುಟ್ಪಾತ್ ತೆರವು ವೇಳೆ GBA ಅಧಿಕಾರಿಗಳ ಮೇಲೆ ಮಾರಣಾಂತಿಕ ಹಲ್ಲೆ; ಮಹಿಳಾ ಎಂಜಿನಿಯರ್‌ಗೆ ಪೆಪ್ಪರ್ ಸ್ಪ್ರೇ!

ಬೆಂಗಳೂರು: ಬೆಂಗಳೂರಿನ  ಶಿವಾಜಿನಗರದಲ್ಲಿ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಅಧಿಕಾರಿಯ ಮೇಲೆ ದುಷ್ಕರ್ಮಿಗಳ ಗುಂಪು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಡೆದಿದೆ.

ಹೌದು. ರಾಜಧಾನಿ ಬೆಂಗಳೂರಿನ ಶಿವಾಜಿನಗರದಲ್ಲಿ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಅಧಿಕಾರಿಗಳ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆ ಮಂಗಳವಾರ ನಡೆದಿದೆ. ಈ ವೇಳೆ ಮಹಿಳಾ ಎಂಜಿನಿಯರ್‌ಗೆ ಪೆಪ್ಪರ್ ಸ್ಪ್ರೇ ಸಿಂಪಡಿಸಲಾಗಿದೆ ಎಂಬ ಆರೋಪವೂ ಕೇಳಿಬಂದಿದ್ದು, ಕರ್ತವ್ಯ ನಿರತ ಸರ್ಕಾರಿ ಅಧಿಕಾರಿಗಳ ಮೇಲಿನ ದಾಳಿಯಿಂದ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

ಕಾರ್ಯಾಚರಣೆಯ ನೇತೃತ್ವ ವಹಿಸಿದ್ದ GBA ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ಮಾಧವ್ ರಾವ್ , ಎಇ ಗೌತಮ್, ಎಇ ರುಚಿತಾ  ಅವರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ರುಚಿತಾ ಅವರ ಮೇಲೆ ಪೆಪ್ಪರ್ ಸ್ಪ್ರೇ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಪೊಲೀಸ್ ಠಾಣೆ್ಗೆ ದೂರು ನೀಡಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಏನಿದು ಘಟನೆ

ಶಿವಾಜಿನಗರ ಬಸ್ ನಿಲ್ದಾಣದ ಸುತ್ತಮುತ್ತ ರಸ್ತೆಬದಿಯ ಅಕ್ರಮ ಒತ್ತುವರಿಯನ್ನು ತೆರವುಗೊಳಿಸುತ್ತಿದ್ದ ವೇಳೆ ಕೆಲವರು ಕಾರ್ಯಾಚರಣೆಗೆ ಅಡ್ಡಿಪಡಿಸಿ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದ್ದಾರೆ. ಬಳಿಕ ಏಕಾಏಕಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿ, ಸಿಬ್ಬಂದಿಯನ್ನು ರಸ್ತೆಯಲ್ಲೇ ಬೆನ್ನಟ್ಟಿದ ಪರಿಣಾಮ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು.

ಸಾರ್ವಜನಿಕ ಕರ್ತವ್ಯ ನಿರ್ವಹಿಸುತ್ತಿದ್ದ ಸರ್ಕಾರಿ ಅಧಿಕಾರಿಯ ಮೇಲೆಯೇ ಹಲ್ಲೆ ನಡೆದಿರುವುದು ಭದ್ರತೆ ಮತ್ತು ಕಾನೂನು ಸುವ್ಯವಸ್ಥೆ ಕುರಿತು ಪ್ರಶ್ನೆಗಳನ್ನು ಎಬ್ಬಿಸಿದೆ. ಹಲ್ಲೆ ನಡೆಸಿದ ಆರೋಪಿಗಳ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ. ತನಿಖೆ ಬಳಿಕ ಘಟನೆಯ ಹಿಂದಿನ ನಿಖರ ಕಾರಣ ಬಹಿರಂಗವಾಗಲಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular