HomeKarnatakaಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಜಾರಿ ಅನಿವಾರ್ಯ, ಹಿಂದೆ ಸರಿಯಲ್ಲ: ಸಿಎಂ ಡಿ.ಕೆ. ಶಿವಕುಮಾರ್

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಜಾರಿ ಅನಿವಾರ್ಯ, ಹಿಂದೆ ಸರಿಯಲ್ಲ: ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ರಾಜ್ಯದ ವಿದ್ಯುತ್ ಸಮಸ್ಯೆ ಬಗೆಹರಿಸಲು ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಜಾರಿಗೊಳಿಸುವುದು ಅನಿವಾರ್ಯವಾಗಿದೆ. ಈ ವಿಚಾರದಲ್ಲಿ ಹಿಂದಡಿ ಇಡುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಡಾ. ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯದ ಜ್ಞಾನಜೋತಿ ಸಭಾಂಗಣದಲ್ಲಿ ಸೋಮವಾರ ಕರ್ನಾಟಕ ವಿದ್ಯುತ್ ನಿಗಮ ನಿಯಮಿತದ 57ನೇ ಸಂಸ್ಥಾಪನಾ ದಿನಾಚರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯನ್ನು ಬಹಳ ಹಿಂದೆ ಆರಂಭಿಸಲು ಸಿದ್ಧತೆಗಳು ನಡೆದಿದ್ದವು. ಆದರೆ ಆಗಿರಲಿಲ್ಲ, ಈಗ ಈ ನಿಟ್ಟಿನಲ್ಲಿ ಪ್ರಯತ್ನ ನಡೆಯುತ್ತಿವೆ. ವಿವಿಧ ರೀತಿಯ ಅನುಮತಿಗಳನ್ನು ಪಡೆದುಕೊಳ್ಳಲಾಗುತ್ತಿದೆ. ಆದರೂ ಕೆಲವರು ಆಕ್ಷೇಪಣೆ ಎತ್ತುತ್ತಿದ್ದಾರೆ. ಈ ಕಾರಣಕ್ಕೆ ರಾಜ್ಯಕ್ಕೆ ಅಗತ್ಯವಾದ ಈ ಯೋಜನೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂಧನ ಸಚಿವ ಕೆ.ಜೆ. ಜಾರ್ಜ್ ಮಾತನಾಡಿ, ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯ ಮೂಲಕ ಕೇವಲ 125 ಎಕರೆ ಅರಣ್ಯದಲ್ಲಿ 2000 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಸಾಧ್ಯವಾಗಲಿದೆ. ಅದರಲ್ಲೂ ಶಾಶ್ವತವಾಗಿ ಬಳಕೆಯಾಗುವ ಅರಣ್ಯ ಕೇವಲ 25 ಎಕರೆ ಮಾತ್ರ. ಯೋಜನೆಯಿಂದ ಇಡೀ ರಾಜ್ಯದ ಜನರಿಗೆ ಅನುಕೂಲವಾಗುತ್ತದೆ. ಕೆಲವರು ವೈಯಕ್ತಿಕ ಕಾರಣಗಳಿಗೆ ಯೋಜನೆಯ ಬಗ್ಗೆ ದೂರುತ್ತಿದ್ದಾರೆ ಎಂದು ಹೇಳಿದ್ದಾರೆ.

ಒಂದು ಮರ ಕಡಿದರೆ ಹತ್ತು ಮರ ಬೆಳೆಸುತ್ತೇವೆ. ರಾಜ್ಯ ಹಾಗೂ ಕೇಂದ್ರದ ಸಂಬಂಧಿತ ಇಲಾಖೆಗಳ ಅನುಮತಿ ದೊರೆತರೆ ಯೋಜನೆ ಅನುಷ್ಠಾನವಾಗಲಿದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular