HomeKarnatakaಕೆಪಿಎಸ್ ಸಿ ಅಕ್ರಮ: ರಾಜ್ಯ ಸರ್ಕಾರ, ಸಿಬಿಐಗೆ ಹೈಕೋರ್ಟ್ ನೋಟಿಸ್ ಜಾರಿ

ಕೆಪಿಎಸ್ ಸಿ ಅಕ್ರಮ: ರಾಜ್ಯ ಸರ್ಕಾರ, ಸಿಬಿಐಗೆ ಹೈಕೋರ್ಟ್ ನೋಟಿಸ್ ಜಾರಿ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ನೇಮಕಾತಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ರಾಜ್ಯ ಸರ್ಕಾರ ಹಾಗೂ ಸಿಬಿಐಗೆ ನೋಟಿಸ್ ಜಾರಿ ಮಾಡಿದೆ.

ಪ್ರಕರಣ ಸಂಬಂಧ ಸಿಬಿಐ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯಲ್ಲಿ ಅಮಾನತುಗೊಂಡ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್ ಅವರ ಪುತ್ರಿಯ ಆಯ್ಕೆ ಸೇರಿದಂತೆ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿದೆ.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಅಖಿಲ ಕರ್ನಾಟಕ ವಿದ್ಯಾರ್ಥಿ ಸಂಘದ ಪರವಾಗಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ, ಜುಲೈ 29ರೊಳಗೆ ರಾಜ್ಯ ಸರ್ಕಾರ ತನ್ನ ನಿಲುವು ತಿಳಿಸುವಂತೆ ಸೂಚಿಸಿದ್ದಾರೆ. ಈ ನಡುವೆ ಸರ್ಕಾರ ವಿಶೇಷ ತನಿಖಾ ತಂಡ (SIT) ರಚಿಸಿ ಪ್ರಕರಣವನ್ನು ವರ್ಗಾಯಿಸಲು ಮುಂದಾದರೆ, ಅರ್ಜಿದಾರರು ಮತ್ತೆ ನ್ಯಾಯಾಲಯದ ಮೊರೆ ಹೋಗಲು ಅವಕಾಶವಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜುಲೈ 3ರಂದು ಸಲ್ಲಿಸಿದ್ದ ದೂರಿನ ಆಧಾರದಲ್ಲಿ ವಿಧಾನದೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದರೂ, ಅದು ಕೇವಲ ಮೇಲ್ನೋಟದ ಕ್ರಮವಾಗಿದೆ. ಮೂಲ ಆರೋಪಗಳ ಬಗ್ಗೆ ಸಮಗ್ರ ತನಿಖೆ ನಡೆದಿಲ್ಲ ಎಂದು ಅರ್ಜಿದಾರರ ಪರ ವಕೀಲರು ವಾದಿಸಿದರು. ಸಾರ್ವಜನಿಕರ ಆಕ್ರೋಶ ತಣಿಸಲು ಸರ್ಕಾರ ಎಸ್‌ಐಟಿ ರಚಿಸುವ ಸಾಧ್ಯತೆಯೂ ಇದೆ ಎಂದು ಅವರು ನ್ಯಾಯಾಲಯದ ಗಮನಕ್ಕೆ ತಂದರು.

ವಾದ ಆಲಿಸಿದ ಹೈಕೋರ್ಟ್, ರಾಜ್ಯ ಸರ್ಕಾಅರ ಹಾಗೂ ಸಿಬಿಐಗೆ ನೋಟಿಸ್ ಜಾರಿ ಮಾಡಿದ್ದು, ಪ್ರಕರಣದ ಮುಂದಿನ ವಿಚಾರಣೆ ಜುಲೈ 29ಕ್ಕೆ ನಿಗದಿಗೊಳಿಸಿದೆ.

ಕೆಪಿಎಸ್‌ಸಿ ಅಧ್ಯಕ್ಷರಾಗಿದ್ದ ಶಿವಶಂಕರಪ್ಪ ಸಾಹುಕಾರ್ ಅವರು ನೇಮಕಾತಿ ಪ್ರಕ್ರಿಯೆಯಲ್ಲಿ ಹಿತಾಸಕ್ತಿ ಸಂಘರ್ಷ ಉಂಟುಮಾಡುವ ರೀತಿಯಲ್ಲಿ ವರ್ತಿಸಿ, ತಮ್ಮ ಇಬ್ಬರು ಪುತ್ರಿಯರ ಆಯ್ಕೆಗೆ ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ. ಅಲ್ಲದೆ, 3ಬಿ ಮೀಸಲಾತಿ ಪಡೆಯಲು ಅಗತ್ಯವಾಗಿರುವ ಆದಾಯ ಪ್ರಮಾಣಪತ್ರದಲ್ಲಿ ಅವರ ವಾರ್ಷಿಕ ಆದಾಯವನ್ನು ಕೇವಲ 40 ಸಾವಿರ ರೂಪಾಯಿ ಎಂದು ತೋರಿಸಲಾಗಿದೆ ಎಂಬ ಗಂಭೀರ ಆರೋಪವನ್ನೂ ಉಲ್ಲೇಖಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular