ಬಳ್ಳಾರಿ : ನಗರದ ಹಿರಿಯಾಳ್ ಕುಡಂ ಈದ್ಗಾ ರಸ್ತೆಯ ಕುರುಗೋಡು ತಾಲೂಕು ಪಶ್ಚಿಮ ವಲಯ ವ್ಯಾಪ್ತಿಯ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವರ್ಷದ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಶಾಲೆಯಲ್ಲಿ ಹೊಸ ವಿಷಯವಾದ ಎಐ ತಂತ್ರಾAಶ ಆಧಾರಿತ ಬೋಧನೆ ಮಾಡಲು ಕಂಪ್ಯೂಟರ್ ಅತಿಥಿ ಶಿಕ್ಷಕರ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಕಂಪ್ಯೂಟರ್‌ನಲ್ಲಿ ಡಿಪ್ಲೋಮಾ, ಬಿ.ಸಿ.ಎ., ಬಿ.ಎಸ್.ಸಿ ಕಂಪ್ಯೂಟರ್ ಸೈನ್ಸ್ ಹಾಗೂ ಕಂಪ್ಯೂಟರ್ ವಿಷಯದಲ್ಲಿ ಪಿ.ಜಿ ಹಾಗೂ ಡಿಪ್ಲೋಮಾ ತತ್ಸಮಾನ ಕಂಪ್ಯೂಟರ್ ಸರ್ಟಿಫಿಕೇಟ್ ಕೋರ್ಸ್ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದಾಗಿದೆ.
ಜು.23 ರಂದು ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಖುದ್ದಾಗಿ ಶಾಲಾ ಮುಖೋಪಾಧ್ಯಯರ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮಲ್ಲಿಕಾರ್ಜುನ (ಮೊ.7892989253) ಅಥವಾ ಶಾಲೆಯ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಶಾಲೆಯ ಮುಖೋಪಾಧ್ಯಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ವಿವಿಧ ಧನಸಹಾಯಕ್ಕೆ ಅರ್ಜಿ ಆಹ್ವಾನ
ರಾಜ್ಯಾದ್ಯಂತ ಹಾಗೂ ಹೊರರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಕನ್ನಡ ಭಾಷೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ ಹಾಗೂ ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸಲು ಶ್ರಮಿಸುತ್ತಿರುವ ನೋಂದಾಯಿತ ಸಂಘ-ಸಂಸ್ಥೆಗಳಿಗೆ ಮತ್ತು ಕಲಾವಿದರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಧನಸಹಾಯ ನೀಡಲು ಅರ್ಜಿಗಳನ್ನು ಆಹ್ವಾನಿಸಿದೆ.
2026-27ನೇ ಸಾಲಿನ ಸಾಮಾನ್ಯ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಯಡಿ ವಿವಿಧ ಸೌಲಭ್ಯಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.ನೋಂದಾಯಿತ ಸಾಂಸ್ಕೃತಿಕ ಸಂಘ-ಸಂಸ್ಥೆಗಳಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಧನಸಹಾಯ, ವಾದ್ಯಪರಿಕರ ಹಾಗೂ ವೇಷಭೂಷಣ ಖರೀದಿಗಾಗಿ ಕಲಾವಿದರಿಗೆ ಸೌಕರ್ಯ ಕಲ್ಪಿಸಲು ಧನಸಹಾಯ, ಚಿತ್ರಕಲೆ ಮತ್ತು ಶಿಲ್ಪಕಲಾಕೃತಿಗಳ ಪ್ರದರ್ಶನ ಆಯೋಜಿಸಲು ಧನಸಹಾಯ ನೀಡಲಾಗುತ್ತದೆ.
ಆನ್‌ಲೈನ್ ಮೂಲಕ ಸೇವಾಯೋಜನೆ ವೆಬ್‌ಸೈಟ್ sevasindhu.karnataka.gov.in ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿಗಳನ್ನು ನೇರವಾಗಿ ಇಲಾಖೆಯ ಕಚೇರಿಯಲ್ಲಿ ಸ್ವೀಕರಿಸಲಾಗುವುದಿಲ್ಲ. ನಿಗದಿತ ದಿನಾಂಕದ ನಂತರ ಬರುವ ಅರ್ಜಿಗಳನ್ನು ಪರಿಗಣಿಸುವುದಿಲ್ಲ. ಆಗಸ್ಟ್ 20 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.ವಿವರಿಗಳಿಗಾಗಿ ಮಾರ್ಗಸೂಚಿಗಳನ್ನು ಸೇವಾಸಿಂಧು ಪೋರ್ಟಲ್ ಹಾಗೂ ಇಲಾಖೆಯ ಅಧಿಕೃತ ವೆಬ್‌ಸೈಟ್ kannadasiri.karnataka.gov.in ನಲ್ಲಿ ನೀಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಗರದ ಡಾ. ರಾಜ್‌ಕುಮಾರ್ ರಸ್ತೆಯಲ್ಲಿರುವ ಸಾಂಸ್ಕೃತಿಕ ಸಮುಚ್ಚಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಅಥವಾ ದೂ.080-24410547, 080-22213530, 080-22241325, 08392-275182 ಹಾಗೂ ಮೊ. 8792662814, 8792662816, 9986837037, 9900337738, 9448436877, 9480197511, 9916600027 ಗೆ ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

