HomeKarnatakaGOOD NEWS : ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 36,944 ಅತಿಥಿ ಶಿಕ್ಷಕರ ನೇಮಕಕ್ಕೆ ಸರ್ಕಾರ...

GOOD NEWS : ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 36,944 ಅತಿಥಿ ಶಿಕ್ಷಕರ ನೇಮಕಕ್ಕೆ ಸರ್ಕಾರ ಆದೇಶ ; ಇಲ್ಲಿದೆ ಜಿಲ್ಲಾವಾರು ಹುದ್ದೆಗಳ ಪಟ್ಟಿ

ಬೆಂಗಳೂರು : ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಯನ್ನು ಕಾಪಾಡುವ ಉದ್ದೇಶದಿಂದ 2026-27ನೇ ಶೈಕ್ಷಣಿಕ ವರ್ಷಕ್ಕೆ ಒಟ್ಟು 36,944 ಅತಿಥಿ ಶಿಕ್ಷಕರ ನೇಮಕಕ್ಕೆ ಶಾಲಾ ಶಿಕ್ಷಣ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ.

ಶಾಶ್ವತ ಶಿಕ್ಷಕರ ನೇಮಕವಾಗುವವರೆಗೆ ಅಥವಾ 2027ರ ಮಾರ್ಚ್ ಅಂತ್ಯದವರೆಗೆ, ಯಾವುದು ಮೊದಲೋ ಅಲ್ಲಿಯವರೆಗೆ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಇಲಾಖೆ ಅನುಮತಿ ನೀಡಿದೆ. ಸರ್ಕಾರ ಅನುಮೋದಿಸಿದ ಒಟ್ಟು ಹುದ್ದೆಗಳ ಪೈಕಿ ಮೊದಲ ಹಂತದಲ್ಲಿ 30,337 ಖಾಲಿ ಹುದ್ದೆಗಳಿಗೆ ಜಿಲ್ಲಾವಾರು ಹಾಗೂ ತಾಲ್ಲೂಕುವಾರು ಅತಿಥಿ ಶಿಕ್ಷಕರ ನೇಮಕಾತಿಗೆ ಅವಕಾಶ ಕಲ್ಪಿಸಲಾಗಿತ್ತು. ಈ ನೇಮಕಾತಿಯನ್ನು ಸರ್ಕಾರ ನಿಗದಿಪಡಿಸಿದ ನಿಯಮಗಳು ಹಾಗೂ ಷರತ್ತುಗಳ ಅನ್ವಯ ನಡೆಸಲಾಗಿದೆ.

ಎರಡನೇ ಹಂತದಲ್ಲಿ 6,617 ಹೆಚ್ಚುವರಿ ಹುದ್ದೆಗಳು

ಜಿಲ್ಲೆಗಳಿಂದ ಬಂದ ಬೇಡಿಕೆಗಳು ಹಾಗೂ ವಿದ್ಯಾರ್ಥಿ-ಶಿಕ್ಷಕರ ಅನುಪಾತ (PTR) ಆಧಾರದ ಮೇಲೆ ಎರಡನೇ ಹಂತದಲ್ಲಿ 6,617 ಹೆಚ್ಚುವರಿ ಅತಿಥಿ ಶಿಕ್ಷಕರ ಹುದ್ದೆಗಳನ್ನು ಹಂಚಿಕೆ ಮಾಡಲಾಗಿದೆ. ಇದರೊಂದಿಗೆ 2026-27ನೇ ಸಾಲಿಗೆ ಒಟ್ಟು 36,944 ಅತಿಥಿ ಶಿಕ್ಷಕರ ಹುದ್ದೆಗಳ ಹಂಚಿಕೆ ಪೂರ್ಣಗೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಾರದರ್ಶಕ ನೇಮಕಾತಿಗೆ ಸೂಚನೆ

ಜಿಲ್ಲಾ ಉಪನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ನೇಮಕಾತಿ ಪ್ರಕ್ರಿಯೆಯನ್ನು ಸಂಪೂರ್ಣ ಪಾರದರ್ಶಕವಾಗಿ ನಡೆಸಬೇಕು. ಅಗತ್ಯವಿರುವ ಶಾಲೆಗಳಿಗೆ ಕೂಡಲೇ ಶಾಲಾವಾರು ಹುದ್ದೆ ಹಂಚಿಕೆ ಆದೇಶ ಹೊರಡಿಸಿ, ನಿಯಮಾನುಸಾರ ನೇಮಕಾತಿ ಪೂರ್ಣಗೊಳಿಸುವಂತೆ ಶಾಲಾ ಶಿಕ್ಷಣ ಇಲಾಖೆ ಸೂಚಿಸಿದೆ.

ಲೋಪ ಕಂಡುಬಂದರೆ ಶಿಸ್ತು ಕ್ರಮ

ಅತಿಥಿ ಶಿಕ್ಷಕರ ನೇಮಕಾತಿಯಲ್ಲಿ ಯಾವುದೇ ಅಕ್ರಮ, ಲೋಪ ಅಥವಾ ನಿಯಮ ಉಲ್ಲಂಘನೆ ಕಂಡುಬಂದರೆ ಸಂಬಂಧಪಟ್ಟ ತಾಲ್ಲೂಕು ಅಥವಾ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಪರಿಗಣಿಸಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಇಲಾಖೆ ಎಚ್ಚರಿಕೆ ನೀಡಿದೆ.

ವಿವರಗಳನ್ನು ತಕ್ಷಣ ಸಲ್ಲಿಸಲು ಆದೇಶ

ತಾಲ್ಲೂಕು ಮಟ್ಟದಲ್ಲಿ ನೇಮಕಗೊಂಡ ಅತಿಥಿ ಶಿಕ್ಷಕರ ವಿವರಗಳನ್ನು ಜಿಲ್ಲಾವಾರು ಕ್ರೋಢೀಕರಿಸಿ, ದೃಢೀಕೃತ ಪಿಡಿಎಫ್ (PDF) ರೂಪದಲ್ಲಿ [email protected] ಇ-ಮೇಲ್ ವಿಳಾಸಕ್ಕೆ ಯಾವುದೇ ವಿಳಂಬವಿಲ್ಲದೆ ಕಳುಹಿಸುವಂತೆ ಜಿಲ್ಲಾ ಉಪನಿರ್ದೇಶಕರಿಗೆ ಸೂಚಿಸಲಾಗಿದೆ. ಮಾಹಿತಿ ಸಲ್ಲಿಕೆಯಲ್ಲಿ ವಿಳಂಬ ಅಥವಾ ನಿರ್ಲಕ್ಷ್ಯ ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಆದೇಶದಲ್ಲಿ ತಿಳಿಸಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular