HomeLive Newsಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆಗೆ ಸುಪ್ರೀಂ ಕೋರ್ಟ್ ಸಮ್ಮತಿ

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆಗೆ ಸುಪ್ರೀಂ ಕೋರ್ಟ್ ಸಮ್ಮತಿ

ನವದೆಹಲಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ಧಾರ ಕೈಗೊಂಡಿದೆ.

ಸೌಜನ್ಯ ತಾಯಿ ಕುಸುಮವತಿಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಮ್ ಕೋರ್ಟ್ ನ್ಯಾ. ಸಂಜಯ್ ಕುಮಾರ್ ನೇತೃತ್ವದ ದ್ವಿಸದಸ್ಯ ಪೀಠ, ವಿಚಾರಣೆ ವೇಳೆ ಸಿಬಿಐ ಅನ್ನು ತರಾಟೆಗೆ ತೆಗೆದುಕೊಂಡಿತು. ತನಿಖಾಧಿಕಾರಿ ಘಟನಾ ಸ್ಥಳಕ್ಕೆ ಯಾಕೆ ಹೋಗಿಲ್ಲ ಎಂದು ಪ್ರಶ್ನಿಸಿತು. ಹದಿನಾಲ್ಕು ವರ್ಷ ಆಯಿತು. ಸರಿಯಾದ ತನಿಖೆಯಾಗಿಲ್ಲ. ಸಾಕ್ಷ್ಯಗಳಿಗೆ ಭದ್ರತೆ ಮಂದುವರಿಸಿ. ಆದೇಶ ಮಾಡಿದ ಬಳಿಕ ಮಧ್ಯಂತರ ವರದಿ ಕೇಳುತ್ತೇವೆ. ಎಸ್‌ಐಟಿ ರಚನೆಯ ಬಗ್ಗೆ ನಾವು ನಿರ್ಧರಿಸುತ್ತೇವೆ ಎಂದು ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಕರಣದ ಮರುತನಿಖೆಗೆ ಸಮ್ಮತಿ ಸೂಚಿಸಿರುವ ಸ್ಯುಪ್ರೀಂ ಕೋರ್ಟ್, ಮರುತನಿಖೆಯನ್ನು ಯಾವ ರೀತಿ ಹಾಗೂ ಯಾವ ಏಜೆನ್ಸಿ ಮೂಲಕ ನಡೆಸಬೇಕು ಎಂಬುದರ ಕುರಿತು ವಾದ-ಪ್ರತಿವಾದಗಳನ್ನು ಆಲಿಸಿ ತನ್ನ ತೀರ್ಪನ್ನು ಕಾಯ್ದಿರಿಸಿದೆ.

ನ್ಯಾಯಾಲಯದಲ್ಲಿ ವಿಚಾರಣೆ ವೇಳೆ ರಾಜ್ಯ ಸರ್ಕಾರವು ಪ್ರಕರಣದ ಮರುತನಿಖೆಗಾಗಿ ವಿಶೇಷ ತನಿಖಾ ತಂಡವನ್ನು (SIT) ರಚಿಸಲು ಸಂಪೂರ್ಣ ಸಿದ್ಧವಿರುವುದಾಗಿ ತಿಳಿಸಿದೆ. ಮತ್ತೊಂದೆಡೆ, ಸೌಜನ್ಯ ಅವರ ತಾಯಿ ಕುಸುಮಾವತಿ ಅವರು ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ನೇರ ಉಸ್ತುವಾರಿಯಲ್ಲಿಯೇ ಈ ತನಿಖೆ ನಡೆಯಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ. ತನಿಖಾ ಸಂಸ್ಥೆ ಹಾಗೂ ತನಿಖೆಯ ಸ್ವರೂಪದ ಕುರಿತು ನ್ಯಾಯಾಲಯವು ತನ್ನ ಅಂತಿಮ ಆದೇಶದಲ್ಲಿ ವಿಸ್ತೃತವಾದ ನಿರ್ದೇಶನಗಳನ್ನು ನೀಡಲಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular