ಧಾರವಾಡ: ಚಲಿಸುತ್ತಿದ್ದ ಸರ್ಕಾರಿ ಬಸ್ ಟೈರ್ ಸ್ಫೋಟಗೊಂಡು ಪಲ್ಟಿಯಾದ ಪರಿಣಾಮಮಹಿಳೆಯೋರ್ವರು ಮೃತಪಟ್ಟಿರುವ ಘಟನೆ ಧಾರವಾಡ ತಾಲೂಕಿನ ಅಮ್ಮಿನಬಾವಿಯಲ್ಲಿ ನಡೆದಿದೆ.
ಮೃತರನ್ನು ಬೆಳಗಾವಿ ಜಿಲ್ಲೆಯ ಮುನವಳ್ಳಿಯ ಹುಸೇನಾಬಿ ಕೆಂಗನೂರ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ 8 ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಧಾರವಾಡದಿಂದ ಮಿರಜ್ಗೆ ತೆರಳುತ್ತಿದ್ದ ಸರ್ಕಾರಿ ಬಸ್ ಟೈರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದೆ. ಘಟನೆಯಲ್ಲಿ ಮಹಿಳೆಯರು, ವೃದ್ಧರು ಸೇರಿ 8 ಪ್ರಯಾಣಿಕರು ಗಾಯಗೊಂಡಿದ್ದು, ಅಪಘಾತ ನಡೆದ ಕೂಡಲೇ ಇತರ ವಾಹನಗಳ ಸವಾರರು ಮತ್ತು ಸ್ಥಳೀಯರು ಬಸ್ನಲ್ಲಿದ್ದವರ ರಕ್ಷಣೆಗೆ ಮುಂದಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅಪಘಾತದ ತೀವ್ರತೆಗೆ ಬಸ್ನ ಗಾಜುಗಳು ಪುಡಿ ಪುಡಿಯಾಗಿವೆ. ಮುಂಭಾಗ ಜಖಂಗೊಂಡಿದೆ. ಸ್ಥಳಕ್ಕೆ ಧಾರವಾಡ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

