ಬೆಂಗಳೂರು: ರಾಜ್ಯ ಬಿಜೆಪಿ ನಾಯಕರ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೋಲೀಸ್ ಠಾಣೆಗೆ ಕಾಂಗ್ರೆಸ್ ನಿಂದ ದೂರು ನೀಡಲಾಗಿದೆ.
ಬಿಜೆಪಿ ನಾಯಕರ ವಿರುದ್ಧ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ದೂರು ನೀಡಿದ್ದಾರೆ. ಬಿಜೆಪಿ ನಾಯಕರ ಕಾರ್ ಗಳನ್ನು ತಪಾಸಣೆ ಮಾಡಲು ಒತ್ತಾಯಿಸಿದ್ದಾರೆ. ವಿಪಕ್ಷ ನಾಯಕರಾದ ಆರ್. ಅಶೋಕ, ಛಲವಾದಿ ನಾರಾಯಣಸ್ವಾಮಿ, ಶಾಸಕರಾದ ಡಾ. ಅಶ್ವತ್ಥ್ ನಾರಾಯಣ ಅವರ ಜೊತೆ ಬಂದಿದ್ದ ಇತರರ ಕಾರ್ ಗಳನ್ನು ಪರಿಶೀಲಿಸಬೇಕು ಎಂದು ಒತ್ತಾಯಿಸಿದ್ದಾರೆ.
ವಾಹನಗಳಲ್ಲಿ ಮಾರಕಾಸ್ತ್ರ ಆಯುಧಗಳಿರುವ ಬಗ್ಗೆ ಮಾಹಿತಿ ಇದೆ. ಕೂಡಲೇ ತಪಾಸಣೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

