HomeKarnatakaಭಾರಿ ಮಳೆ ಮುನ್ಸೂಚನೆ ಹಿನ್ನೆಲೆ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ...

ಭಾರಿ ಮಳೆ ಮುನ್ಸೂಚನೆ ಹಿನ್ನೆಲೆ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.

ಅಂಗನವಾಡಿಗಳು, ಶಾಲೆಗಳು, ಪಿಯು ಕಾಲೇಜುಗಳಿಗೆ ರಜೆ ನೀಡಲಾಗಿದೆ. ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು. ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನಂತೆ ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

1. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ವಸತಿ ಶಾಲೆಗಳಿಗೆ ಮತ್ತು ಪದವಿ ಪೂರ್ವ ಹಾಗೂ ಪದವಿ ಪೂರ್ವ ವಸತಿ ಕಾಲೇಜುಗಳಿಗೆ (12ನೇ ತರಗತಿಯವರೆಗೆ) ಯಾವುದೇ ತರಗತಿಗಳನ್ನು ನಡೆಸದಂತೆ ಆದೇಶಿಸಿ, ದಿನಾಂಕ: 23.07.2026 ರಂದು ರಜೆಯನ್ನು ಘೋಷಿಸಲಾಗಿರುತ್ತದೆ. ಸದರಿ ಆದೇಶವನ್ನು ಉಲ್ಲಂಘಿಸಿದಲ್ಲಿ, ವಿಪತ್ತು ನಿರ್ವಹಣಾ ಕಾಯ್ದೆ, 2005 ರ ಕಲಂ 51(ಬಿ) ರ ಅನ್ವಯ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು.

2. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು.

3. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ.

4. ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದು ಹಾಗೂ ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸುವುದು. ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಛೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು.

5. ಪ್ರವಾಸಿಗರು / ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆ ಸೂಚಿಸಲಾಗಿದೆ.

6. ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತೀ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿರಿಸಿಕೊಳ್ಳುವುದು.

* ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಈ ಕೆಳಕಂಡ ದೂರವಾಣಿಯನ್ನು ಸಂಪರ್ಕಿಸುವುದು.

ಟೋಲ್ ಫ್ರೀ ಸಂಖ್ಯೆ: 1077 0824-2442590

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular