HomeKarnatakaಪದವೀಧರರಿಗೆ ಪ್ರತಿ ತಿಂಗಳು 3 ಸಾವಿರ ರೂ.: ಯುವನಿಧಿ ಯೋಜನೆಗೆ ಅರ್ಜಿ ಆಹ್ವಾನ

ಪದವೀಧರರಿಗೆ ಪ್ರತಿ ತಿಂಗಳು 3 ಸಾವಿರ ರೂ.: ಯುವನಿಧಿ ಯೋಜನೆಗೆ ಅರ್ಜಿ ಆಹ್ವಾನ

ಮಡಿಕೇರಿ: 2024, 2025, ಹಾಗೂ 2026ರಲ್ಲಿ ಪದವಿ, ಡಿಪ್ಲೋಮಾ, ಸ್ನಾತಕೋತ್ತರ ಪದವಿ ಉತ್ತೀರ್ಣರಾಗಿ 6 ತಿಂಗಳಾದರೂ ಸರ್ಕಾರಿ, ಖಾಸಗಿ, ಸ್ವಯಂ ಉದ್ಯೋಗ ಹೊಂದಿಲ್ಲದವರು ಮತ್ತು ಉನ್ನತ ವಿದ್ಯಾಭ್ಯಾಸ ಮುಂದುವರೆಸದೆ ಇರುವ ವಿದ್ಯಾರ್ಥಿಗಳಿಂದ ಯುವನಿಧಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಒನ್, ಗ್ರಾಮ ಒನ್, ಮತ್ತು ಬಾಪೂಜಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಅಥವಾ http://sevasindhugs.karnataka.gov.in ಪೋರ್ಟಲ್ ಮೂಲಕ ಉಚಿತವಾಗಿ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಬಹುದು.

ಪದವೀಧರರಿಗೆ, ಸ್ನಾತಕೋತ್ತರ ಪದವೀಧರರಿಗೆ ಪ್ರತಿ ತಿಂಗಳು ರೂ.3,000 ಗಳು ಹಾಗೂ ಡಿಪ್ಲೋಮಾ ಪಡೆದವರಿಗೆ ರೂ.1500 ಗಳನ್ನು ನಿರುದ್ಯೋಗ ಭತ್ಯೆಯನ್ನಾಗಿ ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷಗಳವರೆಗೆ ನೀಡಲಾಗುತ್ತದೆ ಮತ್ತು ಈಗಾಗಲೇ ನೋಂದಾಯಿಸಿಕೊಂಡು ಹಣ ಪಡೆಯತ್ತಿರುವ ಫಲಾನುಭವಿಗಳು, ಪ್ರತಿ ತಿಂಗಳಿಗೊಮ್ಮೆ ಸ್ವಯಂ ಘೋಷಣೆಯನ್ನು ಮಾಡಿಕೊಳ್ಳಬೇಕಾಗಿರುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 1800–599-7154 ಗೆ ಕರೆ ಮಾಡುವ ಮೂಲಕ ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ, ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಉದ್ಯೋಗಾಧಿಕಾರಿ ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular