ಬೆಂಗಳೂರು: ಮನೆಗಳನ್ನು ಬಾಡಿಗೆ ಪಡೆದು ವೇಶ್ಯಾವಾಟಿಕೆ ನಡೆಸುತ್ತಿದ್ದ ನಾಲ್ವರು ಮಹಿಳೆಯರನ್ನು ಸಿಸಿಬಿಯ ಮಹಿಳಾ ರಕ್ಷಣಾ ದಳ ಬಂಧಿಸಿದೆ.
ಬೆಂಗಳೂರಿನ ಚಂದ್ರಾ ಲೇಔಟ್, ಹನುಮಂತನಗರ, ಬಾಗಲಗುಂಟೆ, ಯಲಹಂಕ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಮನೆಗಳನ್ನು ಬಾಡಿಗೆ ಪಡೆದುಕೊಂಡು ಯುವತಿಯರನ್ನು ಕರೆ ತಂದು ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಮಹಿಳಾ ಸಂರಕ್ಷಣಾ ದಳ ಕಾರ್ಯಾಚರಣೆ ನಡೆಸಿದೆ. ಅಮಾಯಕ ಯುವತಿಯರನ್ನು ವೇಶ್ಯಾವಾಟಿಕೆಗೆ ದೂಡಿದ ನಾಲ್ವರು ಮಹಿಳೆಯರನ್ನು ಬಂಧಿಸಲಾಗಿದೆ.
ಹಣ ಗಳಿಸುವ ಉದ್ದೇಶದಿಂದ ವೇಶ್ಯಾವಾಟಿಕೆ ನಡೆಸುತ್ತಿದ್ದರು. ವೇಶ್ಯಾವಾಟಿಕೆ ಬಯಸುವ ಪುರುಷರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಮನೆಗೆ ಕರೆಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದರು ಎಂದು ಹೇಳಲಾಗಿದೆ.

