ಬೆಂಗಳೂರು: ಆರ್ಕಿಟೆಕ್ಚರ್ ಪದವಿ ಕೋರ್ಸ್ ಪ್ರವೇಶಕ್ಕೆ 888 ಅರ್ಹ ಅಭ್ಯರ್ಥಿಗಳ ರ್ಯಾಂಕ್ ಅನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಪ್ರಕಟಿಸಿದೆ.
ಮುಂದಿನ ದಿನಗಳಲ್ಲಿ ಈ ಅಭ್ಯರ್ಥಿಗಳಿಗೂ ಆಪ್ಷನ್ಸ್ ದಾಖಲಿಸಲು ಅವಕಾಶ ನೀಡಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

