HomeLatest NewsBIG NEWS : 'ಕಾಕ್ರೋಚ್ ಜನತಾ ಪಾರ್ಟಿ' ಪ್ರತಿಭಟನೆ ಎಫೆಕ್ಟ್ : ದೆಹಲಿಯ 16 ಮೆಟ್ರೋ...

BIG NEWS : ‘ಕಾಕ್ರೋಚ್ ಜನತಾ ಪಾರ್ಟಿ’ ಪ್ರತಿಭಟನೆ ಎಫೆಕ್ಟ್ : ದೆಹಲಿಯ 16 ಮೆಟ್ರೋ ನಿಲ್ದಾಣಗಳು ತಾತ್ಕಾಲಿಕ ಬಂದ್ !

ನವದೆಹಲಿ : ಭದ್ರತಾ ಕಾರಣಗಳಿಂದಾಗಿ ರಾಜೀವ್ ಚೌಕ್, ಸೆಂಟ್ರಲ್ ಸೆಕ್ರೆಟೇರಿಯಟ್, ಮಂಡಿ ಹೌಸ್, ಐಟಿಒ, ಖಾನ್ ಮಾರ್ಕೆಟ್ ಸೇರಿದಂತೆ ಒಟ್ಟು 16 ಮೆಟ್ರೋ ನಿಲ್ದಾಣಗಳನ್ನು ಗುರುವಾರ ಬೆಳಿಗ್ಗೆ ತಾತ್ಕಾಲಿಕವಾಗಿ ಮುಚ್ಚಲಾಗಿದೆ ಎಂದು ದೆಹಲಿ ಮೆಟ್ರೋ ರೈಲು ನಿಗಮ (DMRC) ತಿಳಿಸಿದೆ.

ಹೌದು.   ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಪ್ರತಿಭಟನೆ ಹಿನ್ನೆಲೆಯಲ್ಲಿ ಭದ್ರತಾ ಕ್ರಮಗಳನ್ನು ಬಿಗಿಗೊಳಿಸಿರುವ ದೆಹಲಿ ಮೆಟ್ರೋ ರೈಲು ನಿಗಮ (DMRC), ರಾಜೀವ್ ಚೌಕ್, ಸೆಂಟ್ರಲ್ ಸೆಕ್ರೆಟೇರಿಯಟ್, ಮಂಡಿ ಹೌಸ್ ಸೇರಿದಂತೆ ಒಟ್ಟು 16 ಮೆಟ್ರೋ ನಿಲ್ದಾಣಗಳನ್ನು ಗುರುವಾರ ಬೆಳಿಗ್ಗೆ ತಾತ್ಕಾಲಿಕವಾಗಿ ಮುಚ್ಚಿದೆ. ಆದರೆ ಪ್ರಮುಖ ಮೂರು ನಿಲ್ದಾಣಗಳಲ್ಲಿ ಇಂಟರ್‌ಚೇಂಜ್ ಸೇವೆ ಎಂದಿನಂತೆ ಮುಂದುವರಿಯಲಿದೆ ಎಂದು ಡಿಎಂಆರ್‌ಸಿ ತಿಳಿಸಿದೆ.

ಜಂತರ್ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ ಪ್ರತಿಭಟನೆಗೆ ಭಾರೀ ಸಂಖ್ಯೆಯಲ್ಲಿ ಜನರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆದರೆ ರಾಜೀವ್ ಚೌಕ್, ಮಂಡಿ ಹೌಸ್ ಹಾಗೂ ಸೆಂಟ್ರಲ್ ಸೆಕ್ರೆಟೇರಿಯಟ್ ಮೆಟ್ರೋ ನಿಲ್ದಾಣಗಳಲ್ಲಿ ಇಂಟರ್‌ಚೇಂಜ್ (ಮಾರ್ಗ ಬದಲಾವಣೆ) ಸೇವೆ ಎಂದಿನಂತೆ ಲಭ್ಯವಿರಲಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ತಾತ್ಕಾಲಿಕವಾಗಿ ಮುಚ್ಚಲಾದ ಇತರೆ ಮೆಟ್ರೋ ನಿಲ್ದಾಣಗಳ ಪಟ್ಟಿಯಲ್ಲಿ ಲೋಕ್ ಕಲ್ಯಾಣ್ ಮಾರ್ಗ್, ಪಟೇಲ್ ಚೌಕ್, ರಾಮಕೃಷ್ಣ ಆಶ್ರಮ ಮಾರ್ಗ್, ಬರಾಖಂಬಾ ರಸ್ತೆ, ಸುಪ್ರೀಂ ಕೋರ್ಟ್, ಸೇವಾ ತೀರ್ಥ್, ಜನಪಥ್, ದೆಹಲಿ ಗೇಟ್, ಇಂದ್ರಪ್ರಸ್ಥ, ಜೋರ್ ಬಾಗ್ ಹಾಗೂ ಶಿವಾಜಿ ಸ್ಟೇಡಿಯಂ ಸೇರಿವೆ. ಈ ಕುರಿತು ಡಿಎಂಆರ್‌ಸಿ ತನ್ನ ಅಧಿಕೃತ ‘ಎಕ್ಸ್’ (ಹಿಂದಿನ ಟ್ವಿಟರ್) ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular