HomeLatest NewsSHOCKING : ನೈಜೀರಿಯಾದಲ್ಲಿ ಕಾಲರಾ ಅಟ್ಟಹಾಸ ; ಬೊರ್ನೋ ರಾಜ್ಯದಲ್ಲಿ 200ಕ್ಕೂ ಹೆಚ್ಚು ಮಂದಿ ಸಾವು.!

SHOCKING : ನೈಜೀರಿಯಾದಲ್ಲಿ ಕಾಲರಾ ಅಟ್ಟಹಾಸ ; ಬೊರ್ನೋ ರಾಜ್ಯದಲ್ಲಿ 200ಕ್ಕೂ ಹೆಚ್ಚು ಮಂದಿ ಸಾವು.!

ಅಬುಜಾ: ನೈಜೀರಿಯಾದ ಈಶಾನ್ಯ ಭಾಗದ ಬೊರ್ನೋ ರಾಜ್ಯದಲ್ಲಿ ಕಾಲರಾ ಸೋಂಕು ಭಾರೀ ಆತಂಕಕ್ಕೆ ಕಾರಣವಾಗಿದೆ. ಕಳೆದ ಎರಡು ತಿಂಗಳಲ್ಲೇ ಈ ಮಹಾಮಾರಿಯಿಂದ ಸುಮಾರು 200 ಮಂದಿ ಮೃತಪಟ್ಟಿದ್ದಾರೆ ಎಂದು ಡಾಕ್ಟರ್ಸ್ ವಿತೌಟ್ ಬಾರ್ಡರ್ಸ್ (MSF) ತಿಳಿಸಿದೆ.ನೈಜೀರಿಯಾದ ಈಶಾನ್ಯ ಭಾಗದ ಬೊರ್ನೋ ರಾಜ್ಯದಲ್ಲಿ ಕಾಲರಾ ಸೋಂಕು ಭೀಕರ ರೂಪ ತಾಳಿದ್ದು, ಕಳೆದ ಎರಡು ತಿಂಗಳಲ್ಲಿ ಸುಮಾರು 200 ಮಂದಿ ಮೃತಪಟ್ಟಿದ್ದಾರೆ. 35,500ಕ್ಕೂ ಹೆಚ್ಚು ಶಂಕಿತ ಪ್ರಕರಣಗಳು ದಾಖಲಾಗಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗಳು ರೋಗಿಗಳಿಂದ ತುಂಬಿ ತುಳುಕುತ್ತಿದ್ದು, ಶುದ್ಧ ಕುಡಿಯುವ ನೀರಿನ ಕೊರತೆ, ಪ್ರವಾಹ ಹಾಗೂ ಕಳಪೆ ನೈರ್ಮಲ್ಯದಿಂದ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದೆ.

ಸ್ಥಳೀಯ ಸರ್ಕಾರದ ದಾಖಲೆಗಳ ಪ್ರಕಾರ, ಜುಲೈ 12ರವರೆಗೆ 198 ಮಂದಿ ಮೃತಪಟ್ಟಿದ್ದು, 35,500ಕ್ಕೂ ಹೆಚ್ಚು ಜನರಲ್ಲಿ ಕಾಲರಾ ಲಕ್ಷಣಗಳು ಕಂಡುಬಂದಿವೆ. ಸೋಂಕಿತರ ಸಂಖ್ಯೆ ಏಕಾಏಕಿ ಹೆಚ್ಚುತ್ತಿರುವುದರಿಂದ ಸ್ಥಳೀಯ ಆಸ್ಪತ್ರೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳು ರೋಗಿಗಳಿಂದ ತುಂಬಿ ತುಳುಕುತ್ತಿದ್ದು, ಅಗತ್ಯ ವೈದ್ಯಕೀಯ ಸೌಲಭ್ಯಗಳು ಹಾಗೂ ನಿಧಿಗಳ ಕೊರತೆಯನ್ನು ಎದುರಿಸುತ್ತಿವೆ.

ಪ್ರವಾಹ, ಕಳಪೆ ಸ್ವಚ್ಛತೆಯೇ ಪ್ರಮುಖ ಕಾರಣ

ಶುದ್ಧ ಕುಡಿಯುವ ನೀರಿನ ಕೊರತೆ, ಕಳಪೆ ನೈರ್ಮಲ್ಯ ವ್ಯವಸ್ಥೆ ಮತ್ತು ಆರೋಗ್ಯ ಸೇವೆಗಳ ಅಭಾವವೇ ಸೋಂಕು ಈ ಮಟ್ಟಿಗೆ ವ್ಯಾಪಿಸಲು ಪ್ರಮುಖ ಕಾರಣವಾಗಿದೆ ಎಂದು ಆರೋಗ್ಯ ತಜ್ಞರು ತಿಳಿಸಿದ್ದಾರೆ. ಏಪ್ರಿಲ್‌ನಲ್ಲಿ ಸುರಿದ ಭಾರಿ ಮಳೆ ಹಾಗೂ ಪ್ರವಾಹದ ಬಳಿಕ ಕಾಲರಾ ಹರಡುವ ಅಪಾಯವಿದೆ ಎಂದು ನೈಜೀರಿಯಾ ರೋಗ ನಿಯಂತ್ರಣ ಕೇಂದ್ರ (NCDC) ಈಗಾಗಲೇ 10 ರಾಜ್ಯಗಳಿಗೆ ಎಚ್ಚರಿಕೆ ನೀಡಿದ್ದರೂ, ಬೊರ್ನೋ ರಾಜ್ಯದಲ್ಲಿ ಪರಿಸ್ಥಿತಿ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದೆ.

ಈ ಸಂಕಷ್ಟವನ್ನು ನಿಯಂತ್ರಿಸಲು ನೈಜೀರಿಯಾ ಸರ್ಕಾರದ ಜೊತೆಗೆ ವಿಶ್ವ ಆರೋಗ್ಯ ಸಂಸ್ಥೆ (WHO), ಯುನಿಸೆಫ್ (UNICEF) ಹಾಗೂ MSF ಸಂಸ್ಥೆಗಳು ಸೇರಿ ಉಚಿತ ಚಿಕಿತ್ಸೆ ಮತ್ತು ತುರ್ತು ವೈದ್ಯಕೀಯ ನೆರವು ಒದಗಿಸುತ್ತಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತುರ್ತು ಕ್ರಮಗಳು ಜಾರಿ.. ಆರೋಗ್ಯ ತಜ್ಞರ ಎಚ್ಚರಿಕೆ

ಸೋಂಕು ನಿಯಂತ್ರಣಕ್ಕಾಗಿ ಸ್ಥಳೀಯ ಆಡಳಿತ ತುರ್ತು ಕ್ರಮಗಳನ್ನು ಕೈಗೊಂಡಿದೆ. ಕಲುಷಿತಗೊಂಡ ಅಣೆಕಟ್ಟುಗಳು ಹಾಗೂ ಜಲಾಶಯಗಳ ನೀರನ್ನು ಕುಡಿಯಬಾರದು ಎಂದು ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ. ಪರ್ಯಾಯವಾಗಿ ಗ್ರಾಮಗಳಿಗೆ ಟ್ಯಾಂಕರ್‌ಗಳ ಮೂಲಕ ಶುದ್ಧ ಕುಡಿಯುವ ನೀರನ್ನು ಪೂರೈಸಲಾಗುತ್ತಿದೆ.

ಕಲುಷಿತ ನೀರು ಮತ್ತು ಆಹಾರದ ಮೂಲಕ ಹರಡುವ ಈ ಕಾಲರಾ ರೋಗಕ್ಕೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ದೊರೆಯದಿದ್ದರೆ ಕೆಲವೇ ಗಂಟೆಗಳಲ್ಲಿ ಜೀವಕ್ಕೆ ಅಪಾಯ ಉಂಟಾಗಬಹುದು ಎಂದು ಆರೋಗ್ಯ ತಜ್ಞರು ಎಚ್ಚರಿಸಿದ್ದಾರೆ. ಈ ಸೋಂಕನ್ನು ತಡೆಗಟ್ಟಲು ಉತ್ತಮ ನೈರ್ಮಲ್ಯ ವ್ಯವಸ್ಥೆ, ಸುರಕ್ಷಿತ ಕುಡಿಯುವ ನೀರು ಹಾಗೂ ಸ್ವಚ್ಛತಾ ಕ್ರಮಗಳೇ ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular