ನವದೆಹಲಿ: ವಿದ್ಯಾರ್ಥಿಗಳ ಮೇಲೆ ಬಲಪ್ರಯೋಗ ಮಾಡುವ ಬದಲು ಅವರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಕಂಡುಕೊಳ್ಳಬೇಕು ಎಂದು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಒತ್ತಾಯಿಸಿದ್ದಾರೆ.
ಸಂಸತ್ತಿನಲ್ಲಿ ಮಾತನಾಡಿದ ಪ್ರಿಯಾಂಕಾ ಗಾಂಧಿ, “ವಿದ್ಯಾರ್ಥಿಗಳ ಮೇಲೆ ನಂಬಿಕೆ ಇದೆ ಎಂದು ಟ್ವೀಟ್ ಮಾಡುತ್ತೀರಿ, ಆದರೆ ಅದೇ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಮಾಡಲಾಗುತ್ತಿದೆ. ಅವರಿಗೆ ಏಕೆ ಹೊಡೆಯಬೇಕು? ಅವರ ಮಾತುಗಳನ್ನು ಆಲಿಸಲು ಅವರನ್ನು ಕರೆದು ಮಾತನಾಡಿ” ಎಂದು ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳು ವ್ಯವಸ್ಥೆಯ ಮೇಲಿನ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಹೇಳಿದ ಅವರು, “ವ್ಯವಸ್ಥೆಯ ಮೇಲಿನ ನಂಬಿಕೆ ಇಲ್ಲದಾಗ, ಅದೇ ವ್ಯವಸ್ಥೆ ನೀಡುವ ಪರಿಹಾರವನ್ನು ವಿದ್ಯಾರ್ಥಿಗಳು ಹೇಗೆ ಒಪ್ಪಿಕೊಳ್ಳುತ್ತಾರೆ? ಮೊದಲು ಅವರ ವಿಶ್ವಾಸವನ್ನು ಮರಳಿ ಗಳಿಸಬೇಕು” ಎಂದರು.ದೇಶದ ವಿವಿಧ ಭಾಗಗಳಲ್ಲಿ ಸಾವಿರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ನಾಯಕತ್ವ ತೋರಿಸಬೇಕಿದೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದರು.
“ಪ್ರಧಾನಿ ಮೋದಿ ಅವರಿಗೆ ನಾಯಕತ್ವ ತೋರಿಸುವ ಸಮಯ ಬಂದಿದೆ
“ಪ್ರಧಾನಿ ಮೋದಿ ಅವರಿಗೆ ನಾಯಕತ್ವ ತೋರಿಸುವ ಸಮಯ ಬಂದಿದೆ. ವಿದ್ಯಾರ್ಥಿಗಳನ್ನು ಕರೆಸಿ ಅವರ ಬೇಡಿಕೆಗಳನ್ನು ಆಲಿಸಿ, ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು” ಎಂದು ಅವರು ಆಗ್ರಹಿಸಿದರು.ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಲಾಠಿಚಾರ್ಜ್ ಮತ್ತು ಅಶ್ರುವಾಯು ಬಳಕೆ ಮಾಡಲಾಗಿದೆ ಎಂಬ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಸರ್ಕಾರಕ್ಕೆ ನಿಜವಾಗಿಯೂ ವಿದ್ಯಾರ್ಥಿಗಳ ಬಗ್ಗೆ ಕಾಳಜಿ ಇದ್ದರೆ, ಲಾಠಿಚಾರ್ಜ್ ಮತ್ತು ಬಲಪ್ರಯೋಗದ ಅಗತ್ಯ ಏನಿತ್ತು?” ಎಂದು ಪ್ರಶ್ನಿಸಿದರು.
ವಿದ್ಯಾರ್ಥಿಗಳು ವ್ಯವಸ್ಥೆಯ ಮೇಲಿನ ವಿಶ್ವಾಸ ಕಳೆದುಕೊಂಡಿದ್ದಾರೆ. ಒಮ್ಮೆ ನಂಬಿಕೆ ಕಳೆದುಹೋದರೆ, ಅದೇ ವ್ಯವಸ್ಥೆ ನೀಡುವ ಪರಿಹಾರವನ್ನು ಅವರು ಹೇಗೆ ಒಪ್ಪಿಕೊಳ್ಳುತ್ತಾರೆ? ಪ್ರತಿಯೊಬ್ಬ ಪೋಷಕರಿಗೂ ಇದು ಅರ್ಥವಾಗುತ್ತದೆ. ಪ್ರಧಾನಮಂತ್ರಿ ಹಾಗೂ ಸರ್ಕಾರವೂ ಇದನ್ನು ಅರ್ಥಮಾಡಿಕೊಳ್ಳಬೇಕು. ಸರ್ಕಾರ ನಿಜವಾಗಿಯೂ ಪರಿಹಾರ ಬಯಸಿದರೆ, ಮೊದಲು ವಿದ್ಯಾರ್ಥಿಗಳ ಮಾತು ಕೇಳಬೇಕು ಮತ್ತು ಅವರ ಬೇಡಿಕೆಗಳನ್ನು ಈಡೇರಿಸಬೇಕು” ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.
“ಇಂದು ಸಾವಿರಾರು ವಿದ್ಯಾರ್ಥಿಗಳು ಇಂಡಿಯಾ ಗೇಟ್, ಜಂತರ್ ಮಂತರ್ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ನಾಯಕರು ತಮ್ಮ ಭಯಗಳನ್ನು ಬದಿಗಿಟ್ಟು ಜನರ ಮಾತು ಆಲಿಸಬೇಕು” ಎಂದು ಅವರು ಹೇಳಿದ್ದಾರೆ.ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ನಡೆಸಲಾಗಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಆರೋಪಿಸಿದ ಅವರು, “ಕಳೆದ ರಾತ್ರಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಲಾಯಿತು. ನಂತರ ಇಂದು ಬೆಳಗ್ಗೆ ಸರ್ಕಾರ ಅವರಿಗೆ ಕಾಳಜಿ ಇದೆ ಎಂದು ಟ್ವೀಟ್ ಮಾಡಿದೆ. ಸರ್ಕಾರಕ್ಕೆ ನಿಜವಾಗಿಯೂ ಕಾಳಜಿ ಇದ್ದರೆ, ಲಾಠಿಚಾರ್ಜ್ಗೆ ಆದೇಶ ನೀಡಿದ್ದು ಏಕೆ? ಅಶ್ರುವಾಯು ಪ್ರಯೋಗ ಮಾಡಿದ್ದು ಏಕೆ?” ಎಂದು ಪ್ರಶ್ನಿಸಿದ್ದಾರೆ.”ವಿದ್ಯಾರ್ಥಿಗಳನ್ನು ಕರೆಸಿ, ಅವರೊಂದಿಗೆ ಮಾತನಾಡಿ, ಅವರ ಸಮಸ್ಯೆಗಳನ್ನು ಆಲಿಸಿ. ಸರ್ಕಾರ ಮತ್ತೆ ವಿಶ್ವಾಸವನ್ನು ಗಳಿಸಲು ಬಯಸಿದರೆ, ವ್ಯವಸ್ಥೆಯ ಹೊರಗೆ ಬಂದು ನೈಜ ಕ್ರಮಗಳನ್ನು ಕೈಗೊಳ್ಳಬೇಕು. ಮೊದಲ ಹೆಜ್ಜೆಯಾಗಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಬೇಕು” ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

