ನವದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತ್ವರಿತ ವಿಚಾರಣೆಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್ ಸ್ಥಾಪಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಕ್ರೋಚ್ ಜನತಾ ಪಾರ್ಟಿ ತ್ವರುತ ನ್ಯಾಯಾಲಯವನ್ನು ತಿರಸ್ಕರಿಸಿದೆ. ತ್ವರಿತ ನ್ಯಾಯಾಲಯವಲ್ಲ, ನಮಗೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಮೊದಲು ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದೆ.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ವಿರುದ್ಧ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ, ದೇಶದ ಯುವಜನತೆಯ ಭವಿಷ್ಯಕ್ಕಿಂತ ಪ್ರಮುಖವಾದದ್ದು ಯಾವುದೂ ಇಲ್ಲ. ನೀಟ್ ಪರೀಕ್ಷೆ ಅಕ್ರಮ ಎಸಗಿದ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಭಾಗಿಯಾದವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಪ್ರಮುಖ ಪ್ರಕರಣದ ಶೀಘ್ರ ವಿಚಾರಣೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಲು ಫಾಸ್ಟ್ ಟ್ರ್ಯಾಕ್ ಕೋರ್ಟ್ ಸ್ಥಾಪಿಸಲಾಗುವುದು ಹಾಗೂ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಧಾನಿ ಮೋದಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಕ್ರೋಚ್ ಜನತಾ ಪಾರ್ಟಿ, ನಮಗೆ ತ್ವರಿತ ನ್ಯಾಯಾಲಯವಲ್ಲ, ಮೊದಲು ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಮೋಡಬೇಕು ಎಂದು ಒತ್ತಾಯಿಸಿದೆ.
ಪರೀಕ್ಷಾ ಅಕ್ರಮ ಖಂಡಿಸಿ ಸಿಜೆಪಿ ಸಂಸತ್ ಚಲೋ ಮೆರವಣಿಗೆ ನಡೆಸಿದ ಬೆನ್ನಲ್ಲೇ ಪ್ರತಿಭಟನಾ ಪ್ರಮುಖರನ್ನು ಕೇಂದ್ರ ಸಚಿವ ಜೆಪಿ.ನಡ್ಡಾ ಕರೆದು ಮಾತುಕತೆ ನಡೆಸಿದ್ದರು. ಆದರೆ ನಡ್ಡಾ ಅವರೊಂದಿಗಿನ ಮಾತುಕತೆಯಿಂದ ಯವೌದೇ ಪ್ರಯೋಜನವಿಲ್ಲ ಎಂದಿರುವ ಸಿಜೆಪಿ ಪ್ರತಿಭಟನೆ ಮುಂದುವರೆಸುವುದಾಗಿ ಘೋಷಿಸಿದೆ. ಈ ನಡುವೆ ದೆಹಲಿಯ ಜಂತರ್-ಮಂತರ್ ನತ್ತ ಪ್ರತಿಭಟನೆಯಲ್ಲಿ ಭಾಗಿಯಾಗಲು ದೇಶದ ನಾನಾ ಮೂಲೆಗಳಿಂದ ಜನರು ಆಗಮಿಸುತ್ತಿದ್ದು, ದೆಹಲಿ ಸರ್ಕಾರ 16 ಮೆಟ್ರೋ ನಿಲ್ದಾಣಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.

