HomeKarnatakaBIG NEWS : ರಾಜ್ಯದ ಸರ್ಕಾರಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ...

BIG NEWS : ರಾಜ್ಯದ ಸರ್ಕಾರಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ

ಬೆಂಗಳೂರು: 2026-27ನೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಗೆ ಸಂಬಂಧಿಸಿದಂತೆ ಕಾಲೇಜು ಶಿಕ್ಷಣ ಇಲಾಖೆ ಮಹತ್ವದ ಪ್ರಕಟಣೆ ಹೊರಡಿಸಿದೆ. ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಅರ್ಜಿಯಲ್ಲಿ ತಿದ್ದುಪಡಿ (Edit) ಮಾಡಲು ಮತ್ತೊಮ್ಮೆ ಅವಕಾಶ ನೀಡಲಾಗಿದ್ದು, ಪರಿಷ್ಕೃತ ವೇಳಾಪಟ್ಟಿಯನ್ನೂ ಪ್ರಕಟಿಸಲಾಗಿದೆ.

ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರು ಹೊರಡಿಸಿರುವ ಪ್ರಕಟಣೆಯ ಪ್ರಕಾರ, ಇಲಾಖಾ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಸರ್ಕಾರಿ ಸಂಸ್ಕೃತ ಕಾಲೇಜುಗಳು ಹಾಗೂ ಚಿತ್ರಕಲಾ ಕಾಲೇಜುಗಳಲ್ಲಿ ಖಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ ಬಳಿಕ ಉಳಿಯುವ ಬೋಧನಾ ಕಾರ್ಯಭಾರಕ್ಕೆ ಅನುಗುಣವಾಗಿ ಅತಿಥಿ ಉಪನ್ಯಾಸಕರು, ಅತಿಥಿ ಗ್ರಂಥಪಾಲಕರು ಹಾಗೂ ಅತಿಥಿ ದೈಹಿಕ ಶಿಕ್ಷಣ ನಿರ್ದೇಶಕರನ್ನು ಆನ್‌ಲೈನ್ ಕೌನ್ಸಿಲಿಂಗ್ ಮೂಲಕ ಆಯ್ಕೆ ಮಾಡಲಾಗುತ್ತದೆ.

ಈ ಹಿಂದೆ ಹೊರಡಿಸಿದ್ದ ಪ್ರಕಟಣೆಗಳಿಗೆ ಅನುಗುಣವಾಗಿ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಅರ್ಜಿಯನ್ನು ತಿದ್ದುಪಡಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ಇದೇ ವೇಳೆ, ಕಾಲೇಜುಗಳ ಪ್ರಾಂಶುಪಾಲರು EMIS ಪೋರ್ಟಲ್‌ನಲ್ಲಿ ಕಾರ್ಯಭಾರದ ಮಾಹಿತಿಯನ್ನು ನವೀಕರಿಸಲು (Update) ಸೂಚಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪರಿಷ್ಕೃತ ವೇಳಾಪಟ್ಟಿ

  • ಅರ್ಜಿಯನ್ನು Edit ಮಾಡಲು ಅವಕಾಶ: ಜುಲೈ 23 ರಿಂದ ಜುಲೈ 24, 2026 ಸಂಜೆ 5.30ರವರೆಗೆ.
  • EMIS ಮೂಲಕ ಕಾರ್ಯಭಾರ Update ಮಾಡಲು ಪ್ರಾಂಶುಪಾಲರಿಗೆ ಅವಕಾಶ: ಜುಲೈ 23 ರಿಂದ ಜುಲೈ 25, 2026ರವರೆಗೆ.
  • ತಾತ್ಕಾಲಿಕ ಕಾರ್ಯಭಾರ ಪ್ರಕಟಣೆ: ಜುಲೈ 27, 2026.
  • ತಾತ್ಕಾಲಿಕ ಕಾರ್ಯಭಾರವನ್ನು EMISನಲ್ಲಿ Edit ಮಾಡಲು: ಜುಲೈ 28, 2026.

ಪ್ರಾಂಶುಪಾಲರು ಲಭ್ಯವಿರುವ ಕಾರ್ಯಭಾರದ ಮಾಹಿತಿಯನ್ನು ಯಾವುದೇ ತಪ್ಪು ಅಥವಾ ವ್ಯತ್ಯಾಸಗಳಿಗೆ ಅವಕಾಶವಾಗದಂತೆ ನಿಖರವಾಗಿ EMIS ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಬೇಕು ಎಂದು ಇಲಾಖೆ ಸೂಚಿಸಿದೆ.ಅಭ್ಯರ್ಥಿಗಳು ನಿಗದಿತ ಅವಧಿಯೊಳಗೆ ತಮ್ಮ ಅರ್ಜಿಗಳನ್ನು ಪರಿಶೀಲಿಸಿ ಅಗತ್ಯ ತಿದ್ದುಪಡಿಗಳನ್ನು ಮಾಡಿಕೊಳ್ಳುವಂತೆ ಕಾಲೇಜು ಶಿಕ್ಷಣ ಇಲಾಖೆ ಮನವಿ ಮಾಡಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular